ಬೆಂಗಳೂರು: ಗಾಳಿ ಆಂಜನೇಯ ದೇವಾಲಯದ ಹಣ ಕಳವು
ನಗರದ ಪ್ರಸಿದ್ಧ ಗಾಳಿ ಆಂಜನೇಯ ದೇವಾಲಯದ ಲಾಕರ್ ಒಡೆದು ಹಣ ಕಳವು ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ನಗರದ ಪ್ರಸಿದ್ಧ ಗಾಳಿ ಆಂಜನೇಯ ದೇವಾಲಯದ ಲಾಕರ್ ಒಡೆದು ಹಣ ಕಳವು ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಮೈಸೂರು ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನ ಐತಿಹಾಸಿಕ ಪ್ರಸಿದ್ಧ ದೇವಸ್ಥಾನವಾಗಿದೆ.
48 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ದೇವಸ್ಥಾನ ಟ್ರಸ್ಟಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಜ. 14ರಂದು ರಾತ್ರಿ ದೇವಾಲಯದ ಗೋಡೆಯ ಮೇಲಿಂದ ಒಳ ನುಗ್ಗಿರುವ ಕಳ್ಳರು ಲಾಕರ್ ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಳ್ಳತನವಾದ ಹಣವು ಧನುರ್ಮಾಸದ ಪ್ರಯುಕ್ತ ಇರುಮುಡಿಯಿಂದ ಬಂದ ಹಣ ಎಂದು ದೇವಾಲಯದ ಟ್ರಸ್ಟಿಗಳು ತಿಳಿಸಿದ್ದಾರೆ.
ಟ್ರಸ್ಟಿಗಳು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


