ಬಾಲ್ಯವಿವಾಹ ತಡೆಯಲು ನೆರವಾಯ್ತು ಬೆಂಗಳೂರು ಸಿಟಿ ಪೊಲೀಸ್ ಫೇಸ್ ಬುಕ್ ಖಾತೆ!
ಬಾಲ್ಯ ವಿವಾಹ ತಡೆಯುವಂತೆ ಕೋರಿ ಅಪ್ರಾಪ್ತೆಯೊಬ್ಬಳು ಸಲ್ಲಿಸಿದ ಮನವಿಗೆ ಬೆಂಗಳೂರು ಪೊಲೀಸರು ಸ್ಪಂದಿಸಿರುವ ಪ್ರಕರಣ ವರದಿಯಾಗಿದೆ.

ಬೆಂಗಳೂರು: ಬಾಲ್ಯ ವಿವಾಹ ತಡೆಯುವಂತೆ ಕೋರಿ ಅಪ್ರಾಪ್ತೆಯೊಬ್ಬಳು ಸಲ್ಲಿಸಿದ ಮನವಿಗೆ ಬೆಂಗಳೂರು ಪೊಲೀಸರು ಸ್ಪಂದಿಸಿರುವ ಪ್ರಕರಣ ವರದಿಯಾಗಿದೆ.
ಮನೆಯವರು ಬಲವಂತವಾಗಿ ತನಗೆ ಮದುವೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಾಲಕಿಯೊಬ್ಬಳು ತನ್ನ ಸ್ನೇಹಿತೆಯ ಫೇಸ್ ಬುಕ್ ಖಾತೆಯಿಂದ ಬೆಂಗಳೂರು ಸಿಟಿ ಪೊಲೀಸ್ ಫೇಸ್ಬುಕ್ ಖಾತೆಗೆ ಪೋಸ್ಟ್ ಮಾಡುವ ಮೂಲಕ ಪೊಲೀಸರಿಗೆ ತನ್ನ ಅಳಲು ತೋಡಿಕೊಂಡಿದ್ದಳು.
ಇದೇ ತಿಂಗಳ 30ಕ್ಕೆ ನನ್ನ ವಿವಾಹ ಮಾಡಲು ಪೋಷಕರು ತೀರ್ಮಾನಿಸಿದ್ದಾರೆ. ನಾನಿನ್ನು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವೆ. ಹೀಗಾಗಿ ನನ್ನ ವಿವಾಹ ಮಾಡದಂತೆ ಪೋಷಕರಿಗೆ ಬುದ್ಧಿವಾದ ಹೇಳಿ ಎಂದು ಬಾಲಕಿ ತಮ್ಮ ತಂದೆಯ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪೋಸ್ಟ್ ಮಾಡಿದ್ದಳು.
ತಕ್ಷಣವೇ ಬೆಂಗಳೂರು ನಗರ ಪೊಲೀಸರು ಮನವಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಂತರ ಬೆಂಗಳೂರು ಪೊಲೀಸರು, ಮೈಸೂರು ಪೊಲೀಸರಿಗೆ ಮಾಹಿತಿ ನೀಡಿ, ಬಾಲಕಿಯ ಪೋಸ್ಟ್ ಕುರಿತು ಮಾಹಿತಿ ನೀಡಿದ್ದರು. ಶೀಘ್ರವೇ ಮೈಸೂರು ಜಿಲ್ಲೆಯ ಜಯಪುರ ಗ್ರಾಮದ ಪೊಲೀಸರು ಬಾಲಕಿಯ ಮನೆಗೆ ತೆರಳಿ, ಬಾಲ್ಯವಿವಾಹ ಅಪರಾಧ ಎಂದು ತಿಳಿ ಹೇಳಿ ಜನವರಿ 30ರಂದು ನಡೆಯಬೇಕಿದ್ದ ಮದುವೆಯನ್ನು ರದ್ದು ಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಂಡಿಲ್ಲ. ಅದರೆ, ಬಾಲಕಿಯ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಾಲಕಿಯು ಮೈಸೂರು ಜಿಲ್ಲೆಯ ಜಯಪುರ ಗ್ರಾಮದವಳು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


