ಫ್ರೀ ಕಾಶ್ಮೀರ ಫಲಕ ಪ್ರದರ್ಶನ: ನಳಿನಿ ಬಾಲಯ್ಯಗೆ ಷರತ್ತುಬದ್ಧ ಜಾಮೀನು
‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಹಾಗೂ ಈ ಪ್ರತಿಭಟನೆಯನ್ನು ಆಯೋಜಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಅವರಿಗೆ ಇಲ್ಲಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿದೆ.

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ. 8 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಹಾಗೂ ಈ ಪ್ರತಿಭಟನೆಯನ್ನು ಆಯೋಜಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಅವರಿಗೆ ಇಲ್ಲಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿದೆ.
ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಆರ್. ಮೆಂಡೋನ್ಸ ಅವರು ಆರೋಪಿಗಳ ಪರ ವಕೀಲರು ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಈ ಆದೇಶ ನೀಡಿದ್ದಾರೆ.
ಆರೋಪಿಗಳಾದ ನಳಿನಿ ಹಾಗೂ ಮರಿದೇವಯ್ಯ ಅವರಿಗೆ ತಲಾ 50 ಸಾವಿರ ರೂಪಾಯಿ ಬಾಂಡ್, ಒಬ್ಬರು ಶೂರಿಟಿ, ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ತನಿಖಾಧಿಕಾರಿಗಳಿಗೆ ಸಹಕರಿಸಬೇಕು, 15 ದಿನಗಳಿಗೆ ಒಮ್ಮೆ ಪೊಲೀಸ್ ಠಾಣೆಗೆ ಹಾಜರಾಗಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು, ಇದೇ ರೀತಿಯ ಅಪರಾಧಗಳನ್ನು ಮತ್ತೆ ಎಸಗಬಾರದು ಮತ್ತಿತರ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಜಯಲಕ್ಷ್ಮೀಪುರಂ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ದೇಶದ್ರೋಹದ ಆರೋಪದಡಿ ಮೊಕದ್ದಮೆ ಹೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


