ರಾಜ್ಯ

ಕಾರಾಗೃಹದಲ್ಲಿ ಕೈದಿಗಳ ಅಸಹಜ ಸಾವು: ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರ ರಚನೆಗೆ 'ಹೈ' ಆದೇಶ

ರಾಜ್ಯದ ಕಾರಾಗೃಹಗಳಲ್ಲಿ ನಡೆದಿರುವ ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಮಧ್ಯಂತರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ.

ಕಾರಾಗೃಹದಲ್ಲಿ ಕೈದಿಗಳ ಅಸಹಜ ಸಾವು: ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರ ರಚನೆಗೆ 'ಹೈ' ಆದೇಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ನಡೆದಿರುವ ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಮಧ್ಯಂತರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ. 

ಕೈದಿಗಳ ಅಸಹಜ ಸಾವು ಪ್ರಕರಣಗಳ ಸಂಬಂಧ ಸುಪ್ರೀಂಕೋರ್ಟ್'ನ ನಿರ್ದೇಶನದ ಮೇರೆಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 

ಪ್ರತಿಯೊಂದು ಕೈದಿಯ ಅಸಹಜ ಸಾವು ಪ್ರಕರಣದಲ್ಲಿ ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 163ನ ನಿಯಮದಂತೆ ಪ್ರತ್ಯೇಕವಾಗಿ ಮಧ್ಯಂತರ ಪರಿಹಾರ ನಿಗದಿಪಡಿಸಿ ಮೃತರ ಕುಟುಂಬದವರಿಗೆ ನೀಡಬೇಕು. ಅದರ ವಿತರಣೆಯಲ್ಲಿನ ವಿಳಂಬ ತಪ್ಪಿಸಲು ಜಿಲ್ಲಾಧಿಕಾರಿಗಳನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.