ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಿಂದ 82 ಕೋಟಿ ರೂ. ನಷ್ಟ; ಸರ್ಕಾರ
ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ ವೇಳೆ ನಡೆದ ಪ್ರತಿಭಟನೆಗಳಿಂದ ಸುಮಾರು 82 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಬೆಂಗಳೂರು: ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ ವೇಳೆ ನಡೆದ ಪ್ರತಿಭಟನೆಗಳಿಂದ ಸುಮಾರು 82 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಅವರು ಪ್ರಕರಣದ ಪ್ರಗತಿ ವರದಿ ಸಲ್ಲಿಸಿದರು.
ಶಿವಕುಮಾರ್ ಅವರ ಬಂಧನ ವಿರೋಧಿಸಿ 2019ರ ಸೆಪ್ಟೆಂಬರ್ 4ರಿಂದ 11ರವರೆಗೆ ರಾಮನಗರ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದಿತ್ತು.
ಪ್ರತಿಭಟನೆಗಳಲ್ಲಿ 82 ಕೋಟಿ ರೂ.ನಷ್ಟವಾಗಿದೆ. ಈ ಸಂಬಂಧ 40 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


