ರಾಜ್ಯ

ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ- ಸಿದ್ದರಾಮಯ್ಯ ಕಿಡಿ

ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್ ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವುದು ಅಮಾನವೀಯ ವರ್ತನೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ- ಸಿದ್ದರಾಮಯ್ಯ ಕಿಡಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್  ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವುದು  ಅಮಾನವೀಯ ವರ್ತನೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 

 'ಹಿಂದುಗಳೆಲ್ಲ ಒಂದು' ಎಂದು ಘೋಷಣೆ ಕೂಗುತ್ತಿರುವ ಸಂಘ ಪರಿವಾರದ ಬಂದುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ? ಎಲ್ಲರಿಗೂ ಸಲ್ಲುವ ಸರ್ಕಾರ ರಾಜ್ಯದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ  ಹೈಕೋರ್ಟ್ ಬೀಸಿರುವ ಈ ಚಾಟಿ ಏಟಿನಿಂದಾದರೂ ಬುದ್ದಿ ಕಲಿಯಲಿ ಎಂದು ಆಶಿಸುತ್ತೇನೆ ಎಂದು ಮಾಧ್ಯಮವೊಂದರಲ್ಲಿ ಬಂದ "ಬಿಎಸ್‌ವೈ ಟಿಪ್ಪಣಿಗೆ ಹೈಕೋರ್ಟ್ ಬೇಸರ" ಎಂಬ ಸುದ್ದಿಯನ್ನು ಅಪ್‌ಲೋಡ್‌ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.