ರಾಜ್ಯ

ಕೆಎಸ್ಆರ್ ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ನೀಡುವಂತೆ....

ಕೆಎಸ್ಆರ್ ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ
ಕುಮಾರಸ್ವಾಮಿ
Published On :

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ನೀಡುವಂತೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ರಸ್ತೆ ಸಾರಿಗೆ ಮತ್ತು ಅಧೀನ ‌ಸಂಸ್ಥೆಗಳಾದ ವಾಯವ್ಯ ,ಈಶಾನ್ಯ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿಗಳಲ್ಲಿ ನೂರಾರು ನೌಕರರು ಸರ್ಕಾರಿ ಸೌಲಭ್ಯವಿಲ್ಲದೆ ಸೂಕ್ತ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ಘೋಷಿಸಿದಂತೆ ಮೈತ್ರಿ ಸರ್ಕಾರದಲ್ಲಿ ರೈತರ ಸಾಲಮನ್ನಾ, ಔರಾದ್ಕರ್ ವರದಿ ಜಾರಿ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಸ್ತೆ ಸಾರಿಗೆ ನಿಗಮದ ನೌಕರರ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗಮದ ನೌಕರರನ್ನು ಪೂರ್ಣಪ್ರಮಾಣದ ಸರ್ಕಾರಿ ನೌಕರರೆಂದು ತೀರ್ಮಾನಿಸಿ ಎಲ್ಲಾ‌ ಸಿದ್ಧತೆಗಳನ್ನು ಮಾಡಲಾಗಿತ್ತಾದರೂ ಅಷ್ಟರಲ್ಲಿ ಮೈತ್ರಿ ಸರ್ಕಾರ ಪತನಗೊಂಡಿತು. ಹೀಗಾಗಿ ಆಡಳಿತಾರೂಢ ಬಿಜೆಪಿ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಕುಮಾರಸ್ವಾಮಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯಿಸಿ ಸಾರಿಗೆ ಸಂಸ್ಥೆಯ ನೌಕರರು ಹಲವು ಬಾರಿ ಧರಣಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.