ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ
ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ಬೀದರ್: ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.
ಮಕ್ಕಳನ್ನು ಬಳಸಿಕೊಂಡು ಪ್ರಧಾನಿಯನ್ನು ಅವಹೇಳನ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ ನಂತರ ಶಾಲೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಯೊಬ್ಬನ ತಾಯಿ ಮತ್ತು ಮುಖ್ಯ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಮೂಲಗಳು ತಿಳಿಸಿವೆ.
ಫಾರಿದಾ ಬೇಗಂ ಮತ್ತು ನವೀದಾ ಎಂಬುವರನ್ನು ಬಂಧಿಸಲಾಗಿದೆ ಎಂದು ಬೀದರ್ ಎಸ್ ಪಿ ಶ್ರೀಧರ್ ಖಚಿತ ಪಡಿಸಿದ್ದಾರೆ.
ಶಾಹಿನ್ ಶಿಕ್ಷಣ ಸಂಸ್ಥೆಗಳ ಸಮೂಹದ ಕೆಲವು ಬೋಧಕ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ದುರದೃಷ್ಟಕರ ಎಂದು ಪ್ರತಿಪಾದಿಸಿರುವ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖಾದಿರ್, ಬೋಧಕರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


