ಕದಂಬೋತ್ಸವಕ್ಕೆ ಬರಲಿದ್ದಾರೆ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕಿ ಕೇಜ್ ಮತ್ತು ರಕ್ಷಿತ್ ಶೆಟ್ಟಿ !
ಬ್ರವರಿ 8ರಿಂದ ಆರಂಭವಾಗುವ ಕದಂಬೋತ್ಸವದಲ್ಲಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ, ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಮತ್ತು ನಟ ರಕ್ಷಿತ್ ಶೆಟ್ಟಿ ಭಾಗವಹಿಸಲಿದ್ದಾರೆ.

ಕಾರವಾರ: ಫೆಬ್ರವರಿ 8ರಿಂದ ಆರಂಭವಾಗುವ ಕದಂಬೋತ್ಸವದಲ್ಲಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ, ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಮತ್ತು ನಟ ರಕ್ಷಿತ್ ಶೆಟ್ಟಿ ಭಾಗವಹಿಸಲಿದ್ದಾರೆ.
ಕನ್ನಡದ ಪ್ರಥಮ ರಾಜಧಾನಿ ತಾಲ್ಲೂಕಿನ ಬನವಾಸಿಯಲ್ಲಿ ಫೆಬ್ರವರಿ 8 ಹಾಗೂ 9ರಂದು ಕದಂಬೋತ್ಸವ ಆಚರಿಸಲು ದಿನಾಂಕ ನಿಗದಿಯಾಗಿದೆ. ಉತ್ಸವ ಆರಂಭವಾಗಿ 25 ವರ್ಷ ಆಗಿರುವ ಪ್ರಯುಕ್ತ ಬೆಳ್ಳಿ ಹಬ್ಬ ಆಚರಣೆಯನ್ನು ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿೃದ್ದಾರೆ, ದಂಬೋತ್ಸವದ ಪೂರ್ವಭಾವಿಯಾಗಿ ಕದಂಬ ಜ್ಯೋತಿ ಸಂಚಾರ, ಗುಡ್ನಾಪುರ ಉತ್ಸವ ನಡೆಯಲಿದೆ. ಕದಂಬೋತ್ಸವದ ಅಧಿಕೃತ ಉದ್ಘಾಟನೆಯನ್ನು ಮಧುಕೇಶ್ವರ ದೇವಾಲಯದ ಆವರಣದಲ್ಲಿರುವ ಕಲ್ಲಿನ ಮಂಚದ ಎದುರು ಮಾಡುವ ಕುರಿತು ಹಾಗೂ ದೇವಾಲಯಕ್ಕೆ ವಿಶೇಷ ದೀಪಾಲಂಕಾರ ಮಾಡುವ ಕುರಿತು ಕ್ರಮವಹಿಸಲಾಗುವುದು’ ಎಂದು ಉತ್ತರ ಕನ್ನಡ ಡಿಸಿ ಹರೀಶ್ ಕುಮಾರ್ ಹೇಳಿದ್ದಾರೆ.
ಶೀಘ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪಂಪ ಪ್ರಶಸ್ತಿ ಪ್ರಕಟಿಸಲಿದೆ, ಅದನ್ನು ಯಡಿಯೂರಪ್ಪ ಪ್ರಧಾವ ಮಾಡಲಿದ್ದಾರೆ. ಫೆ.8,9ರಂದು ಕದಂಬೋತ್ಸವ ನಡೆಯುತ್ತಿದ್ದು, ಫೆ. 8 ರಂದು ವ್ಯವಸ್ಥಿತವಾದ ಮ್ಯಾರಾಥಾನ್ ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಜಿಲ್ಲೆಮತ್ತು ಬನವಾಸಿಯತ್ತ ಸೆಳೆಯಬಹುದಾಗಿದೆ ಎಂದರು.
ಇದೇ ಮೊದಲ ಬಾರಿಗೆ ಕಲಾವಿದ ರಿಕಿಕೇಜ್ ಗ್ರಾಮೀಣ ಭಾಗದಲ್ಲಿ ತಮ್ಮ ಸಂಗೀತ ಪ್ರದರ್ಶನ ನಡೆಸಿಕೊಡಲಿದ್ದಾರೆ, ಕನ್ನಡ ಮತ್ತು ಪಾಶ್ಚಾತ್ಯ ಹಾಡುಗಳನ್ನು ರಿಕಿ ಕೇಜ್ ಹಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


