ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ, ಬಾಲಕ ಸೇರಿ ನಾಲ್ವರ ಬಂಧನ
ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಮತ್ತು ಹದಿಹರೆಯದ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಮಂಗಳೂರು: ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಮತ್ತು ಹದಿಹರೆಯದ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಸಿದ್ದೀಕ್ (27), ಕೆ.ಮುಹಮ್ಮದ್ (19), ಹನೀಫ್ (25) ಮತ್ತು ಹದಿನಾರು ವರ್ಷದ ಬಾಲಕ ಬಂಧಿತರು. ಬಂಟ್ವಾಳ ತಾಲೂಕಿನಲ್ಲಿ ವಿವಿಧ ಮೊಬೈಲ್ ಸಂಖ್ಯೆಗಳನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡಿ, ಕೋಮು ಸೌಹಾರ್ದತೆಗೆ ಭಂಗ ತಂದ ಆರೋಪ ಅವರ ಮೇಲಿದೆ, ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರೆಲ್ಲರೂ ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


