ಕ್ವಾರಂಟೈನ್ ನಿಯಮ ಉಲ್ಲಂಘನೆ: ಮೂವರ ವಿರುದ್ಧ ದೂರು
ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು: ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.
ನಗರದಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಗಾರೆಬಾವಿಪಾಳ್ಯದ ಕೃಷ್ಣ, ಹೊಸಪಾಳ್ಯ ನಿವಾಸಿ ಚಕ್ರಧರ್, ಕೂಡ್ಲುಗೇಟ್ ನೋವೆಲ್ ಟೆಕ್ ಪಾರ್ಕ್ ನ ಗೌತಮ್ಗೆ ಕ್ವಾರಂಟೈನ್ಗೆ ಒಳಗಾಗಲು ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೂ, ಈ ಮೂವರು ಅಧಿಕಾರಿಗಳ ಸೂಚನೆ ಲೆಕ್ಕಿಸದೇ ಮನೆಯಿಂದ ಹೊರಗಡೆ ಹೋಗಿದ್ದರು. ಇದನ್ನು ಗಮನಿಸಿ ತಕ್ಷಣ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
ಈ ಮೂವರ ಕುಟುಂಬಸ್ಥರಿಗೆ ಸೋಂಕು ತಗುಲಿರುವ ಕಾರಣ ಹೋಂ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿತ್ತು. ಆದರೆ, ಇವರು ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಹೋಗಿದ್ದು, ಈ ಬಗ್ಗೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಕ್ವಾರಂಟೈನ್ನಲ್ಲಿ ಇದ್ದ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದಾಗ ಮೂವರು ಹೊರ ಹೋಗಿರುವುದು ಗೊತ್ತಾಗಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಸರ್ಕಾರಿ ಆದೇಶ ಉಲ್ಲಂಘನೆಯಡಿ ಎಫ್ಐಆರ್ ದಾಖಲು ಮಾಡಿ ತನಿಖೆ ಮುಂದುವರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


