ರಾಜ್ಯ

ಕೋವಿಡ್-19: ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಆಗಸ್ಟ್ 7ರವರೆಗೆ ರಜೆ ವಿಸ್ತರಣೆ

ಕೋವಿಡ್ -19 ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್‌, ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.

ಕೋವಿಡ್-19: ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಆಗಸ್ಟ್ 7ರವರೆಗೆ ರಜೆ ವಿಸ್ತರಣೆ
Published On :

ಬೆಂಗಳೂರು: ಕೋವಿಡ್ -19 ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್‌, ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಮಾ. 26ರಂದು ಈ ನ್ಯಾಯಾಲಯಗಳಿಗೆ ರಜೆ ಘೋಷಿಸಿ, ಕೇವಲ ತುರ್ತು ಪ್ರಕರಣಗಳ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಈಗಲೂ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಲಾಗಿದೆ.

ಆದರೆ, ಎಲ್ಲಾ ನ್ಯಾಯಾಲಯಗಳಲ್ಲಿ 1963ರ ಇತಿಮಿತಿಯ ಕಾಯ್ದೆಯ ಸೆಕ್ಷನ್ 4 ಮತ್ತು ಮಾರ್ಗಸೂಚಿಗಳ ಅನುಸಾಋ ಪ್ರಕ್ರಿಯೆಗಳು ನಡೆಯಲಿವೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ ಎಂದು ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಡಮಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.