ಕೊರೊನಾ ಭೀತಿ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್ ಡೌನ್
ಕೋವಿಡ್-19 ವಿರುದ್ಧ ಸಮರ ಸಾರುವ ಮೂಲಕ ಕರ್ತವ್ಯ ನಿರತ ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ವೈರಸ್ ಬೆಂಬಿಡದೇ ಕಾಡುತ್ತಿದೆ.

ಬೆಂಗಳೂರು: ಕೋವಿಡ್-19 ವಿರುದ್ಧ ಸಮರ ಸಾರುವ ಮೂಲಕ ಕರ್ತವ್ಯ ನಿರತ ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ವೈರಸ್ ಬೆಂಬಿಡದೇ ಕಾಡುತ್ತಿದೆ.
ನಗರದ ಪಶ್ಚಿಮ ವಿಭಾಗದ ಮತ್ತೊಂದು ಪೊಲೀಸ್ ಠಾಣೆಗೆ ಕೊರೊನಾ ವಕ್ಕರಿಸಿದ್ದು, ಇಂದು ಸೀಲ್‌ಡೌನ್ ಆಗಲಿದೆ.
ಕೊರೊನಾ ಭೀತಿಯಿಂದ ಇಂದು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ಸೀಲ್‌ಡೌನ್ ಗೆ ಒಳಗಾಗಲಿದೆ.
ಇತ್ತೀಚೆಗೆ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದರು. ನಂತರ ಎಲ್ಲಾ ಆರೋಪಿಗಳನ್ನು ಕೋವಿಡ್-19 ಪರೀಕ್ಷೆ ಒಳಪಡಿಸಲಾಗಿತ್ತು. ಇದೀಗ ಈ ಪೈಕಿ ಮೂವರು ಆರೋಪಿಗಳಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆ ಯಿಂದ ದೃಢಪಟ್ಟಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಪಿಗಳ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಈಗಾಗಲೇ ಸಿಲಿಕಾನ್ ಸಿಟಿಯ ಪಶ್ಚಿಮ ವಿಭಾಗದಲ್ಲಿ ಡಿಸಿಪಿ ಕಚೇರಿ, ಚಿಕ್ಕಪೇಟೆ ಎಸಿಪಿ ಕಚೇರಿ, ಉಪ್ಪಾರಪೇಟೆ, ಜೆ.ಜೆ.ನಗರ, ಕಾಮಾಕ್ಷಿಪಾಳ್ಯ, ಕೆ.ಪಿ.ಅಗ್ರಹಾರ, ಕೆಂಗೇರಿ, ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ ಠಾಣೆ ಸೇರಿ 10 ಠಾಣೆಗಳು ಈಗಾಗಲೇ ಸೀಲ್‌ಡೌನ್ ಆಗಿವೆ.
ಇಂದು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


