ರಾಜ್ಯ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ ತೀರ್ಮಾನ, 2-3 ದಿನಗಳಲ್ಲಿ ಪ್ರಕಟ: ಸೋಮಶೇಖರ್ 

ಜೂನ್ 30ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ.

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ ತೀರ್ಮಾನ, 2-3 ದಿನಗಳಲ್ಲಿ ಪ್ರಕಟ: ಸೋಮಶೇಖರ್ 
ಸೋಮಶೇಖರ್
Published On :

ಮಡಿಕೇರಿ: ಜೂನ್ 30ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು
ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಕಾರ ಇಲಾಖೆ ವತಿಯಿಂದ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ತಲಾ 3000 ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮಕ್ಕೆ ಚೆಕ್ ನೀಡುವ ಮೂಲಕ ಚಾಲನೆ ನೀಡಿ ಸಚಿವರು ಮಾತನಾಡಿದರು. 

ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂಬ ಬಗ್ಗೆ ರೈತರಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.