ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ ನೀಡಿ ಗೌರವಿಸಿದ ಕೆ ಎಸ್ ಆರ್ ಟಿಸಿ
ಕೆರೆಗಳನ್ನು ಕಟ್ಟಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಗಮನ ಸೆಳೆದಿರುವ ಮಂಡ್ಯದ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ’ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.

ಬೆಂಗಳೂರು: ಕೆರೆಗಳನ್ನು ಕಟ್ಟಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಗಮನ ಸೆಳೆದಿರುವ ಮಂಡ್ಯದ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ’ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.
ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಈ ವಿಷಯ ತಿಳಿಸಿದ್ದು, ಕಾಮೇಗೌಡರ ಕೋರಿಕೆಯನ್ನು ಸಂಸ್ಥೆ ಈಡೇರಿಸಿದೆ ಎಂದಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಅಪರೂಪದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಕಾಮೇಗೌಡರು ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ ಉಚಿತ ಬಸ್ ಪಾಸ್ ಕಾರ್ಡ್ ಅನ್ನು ಟ್ವೀಟ್ ನಲ್ಲಿ ಯಡಿಯೂರಪ್ಪ ಹಂಚಿಕೊಂಡಿದ್ದಾರೆ. ಕಾಮೇಗೌಡರು ಸಾಮಾನ್ಯ, ವೇಗದೂತ, ರಾಜಹಂಸ, ವೋಲ್ವೋ ಸಹಿತ ಎಲ್ಲಾ ಬಗೆಯ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದಿದ್ದಾರೆ.
Related Article
ನನಗೆ ಒಂದು ಉಚಿತ ಬಸ್ ಪಾಸ್ ಕೊಡಿ ಸಾಕು: ಆಧುನಿಕ ಭಗೀರಥ, 'ಕೆರೆಗಳ ಮನುಷ್ಯ' ಕಾಮೇಗೌಡರ ಬಯಕೆ!
ಮಂಡ್ಯದ ಭಗೀರಥ ಕಾಮೇಗೌಡರ ಜೀವನ ಚರಿತ್ರೆ ಕುರಿತು ಸಾಕ್ಷ್ಯಚಿತ್ರ
ಮಂಡ್ಯದ 'ಆಧುನಿಕ ಭಗೀರಥ' ಕಾಮೇಗೌಡರನ್ನು ಕೊಂಡಾಡಿದ ಪ್ರಧಾನಿ ಮೋದಿ.!
ಜಲ ಸಂರಕ್ಷಣೆಗಾಗಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ: ಕಾಮೇಗೌಡ
83ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಇನ್ನೂ 4 ಕೆರೆಗಳನ್ನು ಅಗೆಯುತ್ತಾರಂತೆ ಅಜ್ಜ ಕಾಮೇಗೌಡರು!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


