ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ
ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.ಡಾ. ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿಮೂಲದ ಗರ್ಭಿಣಿ ಮಹಿಳೆಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ.

ಮಂಡ್ಯ: ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.
ಡಾ.ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿ ಮೂಲದ ಗರ್ಭಿಣಿಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ.
ಈಗ ಮಗುವಿನ ಆರೋಗ್ಯ ಚೆನ್ನಾಗಿದೆ. ಇನ್ನೆರಡು ದಿನದಲ್ಲಿ ಮಗುವಿಗೆ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.ಈಗಾಗಲೇ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಸುಮಾರು ೪೦೦ಕ್ಕೂ ಅಧಿಕ ಕೋವಿಡ್ ಸೋಂಕಿತರಿದ್ದು, ಅದರಲ್ಲಿ ಗರ್ಭಿಣಿ ಮಹಿಳೆಗೆ ಸೋಂಕು ತಗುಲಿರುವುದು ಮೊದಲ ಪ್ರಕರಣವಾಗಿತ್ತು.
ಇದರಿಂದ ವೈದ್ಯರಲ್ಲಿ ಸಹಜವಾಗಿ ಆತಂಕ ಮೂಡಿತ್ತು. ಆದರೆ ಇದೀಗ ಇದೀಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ವೈದ್ಯರ ಕಾರ್ಯಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.ಶಸ್ತ್ರ ಚಿಕಿತ್ಸೆ ಯಶ್ವಸಿ ಬಳಿಕ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡಿತ್ತು.
ವರದಿ: ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


