ರಾಜ್ಯ

ಮುಖ್ಯಮಂತ್ರಿಗಳಿಗೆ ನ್ಯಾ. ನಾಗಮೋಹನ್‌ ದಾಸ್‌ ವರದಿ ಸಲ್ಲಿಕೆ: ಎಸ್‌ಟಿ ಮೀಸಲು ಶೇ.2ಕ್ಕೆ ಹೆಚ್ಚಿಸಲು ಶಿಫಾರಸು

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಪರಿಷ್ಕರಣೆ ಸಂಬಂಧ ಸರ್ಕಾರ ರಚಿಸಿದ್ದ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ಮುಖ್ಯಮಂತ್ರಿಗೆ ವರದಿ ಸಲ್ಲಿಕೆ ಮಾಡಿದೆ.

ಮುಖ್ಯಮಂತ್ರಿಗಳಿಗೆ ನ್ಯಾ. ನಾಗಮೋಹನ್‌ ದಾಸ್‌ ವರದಿ ಸಲ್ಲಿಕೆ: ಎಸ್‌ಟಿ ಮೀಸಲು ಶೇ.2ಕ್ಕೆ ಹೆಚ್ಚಿಸಲು ಶಿಫಾರಸು
ಯಡಿಯೂರಪ್ಪ
Published On :

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಪರಿಷ್ಕರಣೆ ಸಂಬಂಧ ಸರ್ಕಾರ ರಚಿಸಿದ್ದ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ   ಮುಖ್ಯಮಂತ್ರಿಗೆ  ವರದಿ ಸಲ್ಲಿಕೆ ಮಾಡಿದೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನ್ಯಾ.ನಾಗಮೋಹನ್ ದಾಸ್ ಅವರು ವರದಿ ಸಲ್ಲಿಸಲಿದ್ದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಜನಸಂಖ್ಯಾ ಆಧಾರವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಜಾತಿಗೆ ಹಾಲಿ ಶೇ 15 ರಷ್ಟು ಮೀಸಲಾತಿ ಇದ್ದು ಜನಸಂಖ್ಯೆಗೆ ಹೋಲಿಸಿದರೆ ಶೇ 2% ರಷ್ಟು ಮೀಸಲಾತಿ ಕಡಿಮೆ ಇದೆ. ಅಂತೆಯೇ ಪರಿಶಿಷ್ಟ ಪಂಗಡಕ್ಕೆ ಹಾಲಿ ಶೇ 3 ರಷ್ಟು ಮೀಸಲಾತಿ ಇದ್ದು, ಜನಸಂಖ್ಯೆಗೆ ಅನುಗುಣವಾಗಿ ಶೇ 3ಷ್ಟು ರಷ್ಟು ಹೆಚ್ಚುವರಿ ಮೀಸಲಾತಿ ನೀಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ವಾಲ್ಮೀಕಿ ಗುರುಪೀಠದ ಶ್ರೀಗಳು ಹೋರಾಟ ನಡೆಸಿದ್ದವು.

ಮೈತ್ರಿ ಸರಕಾರದ ಅವಧಿಯಲ್ಲೇ ಮೀಸಲು ಪ್ರಮಾಣ ಹೆಚ್ಚಳಕ್ಕಾಗಿ ಭಾರಿ ಹೋರಾಟ ನಡೆದಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವಾಲ್ಮೀಕಿ ಸಮುದಾಯದ ಮುಖಂಡರು, ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದರು. ಈ ಹೋರಾಟಕ್ಕೆ ಮಣಿದ ಸರಕಾರ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿಆಯೋಗ ರಚನೆ ಮಾಡಿತ್ತು.

ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಈಗ ನೀಡುತ್ತಿರುವ ಶೇ.3ರಷ್ಟಿರುವ ಮೀಸಲು ಸೌಲಭ್ಯವನ್ನು ಶೇ.5ಕ್ಕೆ ಹೆಚ್ಚಿಸುವ ವಿಚಾರದಲ್ಲಿ ತೀವ್ರ ಹೋರಾಟ ನಡೆದ ಹಿನ್ನೆಲೆಯಲ್ಲಿ ಮೈತ್ರಿ ಸರಕಾರದ ಅವಧಿಯಲ್ಲೇ ನ್ಯಾ.ನಾಗಮೋಹನ್‌ದಾಸ್‌ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಮಿತಿ ಅಧಿಕಾರ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿತ್ತು.

850 ಲಿಖಿತ ಅಹವಾಲುಗಳು, 42 ಸಮಾಲೋಚನಾ ಸಭೆಗಳನ್ನು ನಡೆಸಿದ ಆಯೋಗ ವರದಿ ಸಿದ್ಧಗೊಳಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ವರದಿಯನ್ನು ಗುರುವಾರ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.