ಪತ್ರಕರ್ತರಿಗೆ ಕೋವಿಡ್ ವಿಮಾ ಪರಿಹಾರ: ಸಿಎಂ ಭರವಸೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಸಂಪಾದಕರ ಗಿಲ್ಡ್ ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪತ್ರಕರ್ತರನ್ನು ಕೋವಿಡ್-19 ವಿಮಾ ಪ್ಯಾಕೇಜ್ ನಲ್ಲಿ ಸೇರಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಸಂಪಾದಕರ ಗಿಲ್ಡ್ ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪತ್ರಕರ್ತರನ್ನು ಕೋವಿಡ್-19 ವಿಮಾ ಪ್ಯಾಕೇಜ್ ನಲ್ಲಿ ಸೇರಿಸುವಂತೆ ಮನವಿ ಮಾಡಿದ್ದಾರೆ.
ಅಸ್ಸಾಂ ಸರ್ಕಾರ ಪತ್ರಕರ್ತರಿಗೆ 50 ಲಕ್ಷ ರೂಪಾಯಿ ಕೋವಿಡ್ ವಿಮೆ ಘೋಷಣೆ ಮಾಡಿರುವುದು ಸೇರಿದಂತೆ ಹರಿಯಾಣ, ದೆಹಲಿ, ಕೇರಳ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳನ್ನು ಸಿಎಂ ಗಮನಕ್ಕೆ ತಂದಾಗ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಈ ನಿಟ್ಟಿನಲ್ಲಿ ಪತ್ರಕರ್ತರಿಗೂ ಕೋವಿಡ್ ಸಂದರ್ಭದಲ್ಲಿ ವಿಮೆ ಪರಿಹಾರ ಜಾರಿಗೆ ತರುವಂತೆ ಸಿಎಂ ಸೂಚಿಸಿದ್ದಾರೆ.
5 ಲಕ್ಷ ರೂ ಪರಿಹಾರ:ಇತ್ತೀಚೆಗೆ ಮೃತಪಟ್ಟ ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತ ಗೌರಿಪುರ ಚಂದ್ರು (ಜಿ.ಪಿ.ಚಂದ್ರಶೇಖರ) ಮತ್ತು ಬೇಲೂರು ಪ್ರಜಾವಾಣಿ ವರದಿಗಾರ ಬಿ.ಎಂ.ರವೀಶ್ ಅವರ ಕುಟುಂಬಕ್ಕೆ ಇದೇ ಸಂದರ್ಭದಲ್ಲಿ ತಲಾ 5 ಲಕ್ಷ ರೂ ಪರಿಹಾರವನ್ನು ಸಿಎಂ ಮಂಜೂರು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


