ರಾಜ್ಯ

ಸಿಎಂ ನೇತೃತ್ವದಲ್ಲಿ ಟಾಸ್ಕ್ ಪೋಸ್೯ ಸಭೆ: ಕೋವಿಡ್ ನಿಗ್ರಹಕ್ಕೆ ಸಚಿವರಿಗೆ ಜವಾಬ್ದಾರಿ ಹಂಚಿಕೆ

ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್ ಡೌನ್ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದು, ಸೋಂಕಿತ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸಿಎಂ ನೇತೃತ್ವದಲ್ಲಿ ಟಾಸ್ಕ್ ಪೋಸ್೯ ಸಭೆ: ಕೋವಿಡ್ ನಿಗ್ರಹಕ್ಕೆ ಸಚಿವರಿಗೆ ಜವಾಬ್ದಾರಿ ಹಂಚಿಕೆ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್ ಡೌನ್ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದು, ಸೋಂಕಿತ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದೀಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್ ಡೌನ್ ಮಾಡುವಂತೆ ಕೋವಿಡ್ ನಿಗ್ರಹ ಕಾಯ೯ಪಡೆ ಸಭೆಯಲ್ಲಿ ಮುಖ್ಯಂತ್ರಿ ಸೂಚನೆ ನೀಡಿದ್ದಾರೆ. ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ಎಲ್ಲಾ ಸಿಬ್ಬಂದಿ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದಲೇ ರಾಜ್ಯದ ಪರಿಸ್ಥಿತಿ ಸಮಾಧಾನಕರ ಸ್ಥಿತಿಯಲ್ಲಿದೆ ಎಂದರು.

ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ. ಅದನ್ನು ನಿಯಂತ್ರಿಸಿ ಕೋವಿಡ್ ಸೋಂಕು ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾಯ೯ನಿವ೯ಹಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು. 

ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದಶ೯ಕ ರೀತಿಯಲ್ಲಿ ನಿರ್ವಹಿಸುವ ಹಾಗೂ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ದೊರಕಿಸುವ ಕುರಿತು ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂಬುದು ಮುಖ್ಯಮಂತ್ರಿ ಅವರ ಉದ್ದೇಶವಾಗಿದೆ ಎಂದರು. 

ಹೀಗಾಗಿ ಕೋವಿಡ್ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ನೀತಿ ನಿರೂಪಣೆ, ಮಾಗ೯ಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್ ರೂಮ್ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ಕೋವಿಡ್ ಕೇರ್ ಸೆಂಟರ್ ಗಳ ಸ್ಥಾಪನೆ ಮತ್ತು ನಿವ೯ಹಣೆಯನ್ನು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರಿಗೆ ಮತ್ತು ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್ ಅವರಿಗೆ ಖಾಸಗಿ ಆಸ್ಪತ್ರೆಗಳ ನಿವ೯ಹಣೆ ಜವಾಬ್ದಾರಿ ವಹಿಸಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ ಎಂದರು.

ಟಾಸ್ಕ್ ಫೋಸ್೯ ಸಭೆಯಲ್ಲಿ ಲಾಕ್ ಡೌನ್ ವಿಚಾರವು ಚಚೆ೯ಗೆ ಬಂತು. ಈ ಸನ್ನಿವೇಶದಲ್ಲಿ ಲಾಕ್ ಡೌನ್ ಬೇಕಿಲ್ಲ ಎಂದು ತಾವು ಮತ್ತು ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಅವರಿಗೆ ಹೇಳಿದ್ದೇವೆ. ಮುಂದೆ ಅವರು ನಿಧಾ೯ರ ಕೈಗೊಳ್ಳಲಿದ್ದಾರೆ. ಈಗಾಗಲೇ ಯಡಿಯೂರಪ್ಪ ಅವರು ಪ್ರಕಟಿಸಿದ್ದಂತೆ ಭಾನುವಾರ ಮತ್ತು ರಾತ್ರಿ ಕಫ್ಯೂ೯ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಟಾಸ್ಕ್ ಫೋಸ್೯ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಮುಖ್ಯಮಂತ್ರಿ ರಾಜಕೀಯ ಕಾಯ೯ದಶಿ೯ ಎಸ್. ಆರ್. ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವಿವರಿಸಿದರು.

ಇದಕ್ಕೂ ಮೊದಲು ವಿಧಾನಸೌಧದಲ್ಲಿ ನಡೆದ ಕಾಯ೯ಕ್ರಮದಲ್ಲಿ ಸಿಸ್ಕೊ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ಅಡಿ ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಡುಗೆ ನೀಡಿರುವ ಟೆಲಿ ಮೆಡಿಸನ್ ಕಾಟ್೯ಗೆ ಸಚಿವ ಸುಧಾಕರ್ ವಿಧಾನಸೌಧದಲ್ಲಿ ಚಾಲನೆ ನೀಡಿದರು.

ವೈದ್ಯ ಕ್ಷೇತ್ರದಲ್ಲಿ ಹೆಚ್ಚಿನ ತಂತ್ರಜ್ಞಾನ ಬಳಕೆ ಅಗತ್ಯವಿದೆ. ಇದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯವಿದೆ. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಷಯದಲ್ಲೂ ರಾಜ್ಯ ಸಕಾ೯ರ ಅತ್ಯುತ್ತಮ ಗುಣಮಟ್ಟದ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಟೆಲಿ ಮೆಡಿಸನ್ ಕಾಟ್೯ ಅಳವಡಿಕೆಯಿಂದ ರೋಗಿಗಳ ಚಿಕಿತ್ಸೆಗೆ ಮಾಗ೯ದಶ೯ನ ಮಾಡುವುದಲ್ಲದೆ ಅವರ ಎಲ್ಲ ದಾಖಲೆ ಮತ್ತು ಮಾಹಿತಿಗಳ ನಿವ೯ಹಣೆ ಮಾಡಬಹುದಾಗಿದೆ. ಹಿರಿಯ ವೈದ್ಯರು ಮತ್ತು ತಜ್ಞರು ವಾಡು೯ಗಳಿಗೆ ಭೇಟಿ ನೀಡದೆ ರೋಗಿಯನ್ನು ಪರೀಕ್ಷಿಸಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಚಾಲನೆ ನೀಡಿದ ಬಳಿಕ, ಸಚಿವರು ಕೋವಿಡ್ ಆಸ್ಪತ್ರೆಯಲ್ಲಿ ಕಳೆದ ೭ ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿ ಜತೆ ಮಾತನಾಡಿ ಎಲ್ಲ ವಿವರ ಪಡೆದರು. ಕಾಯ೯ಕ್ರಮದಲ್ಲಿ ಸಿಸ್ಕೊ ಸಂಸ್ಥೆಯ ವ್ಯವಸ್ಥಾಪಕ ನಿದೇ೯ಶಕಿ ಡೈಸಿ ಡಿವ್ಯಾಸಿ ಚಿಟಿಲಪಲ್ಲಿ ಹಾಜರಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಎಂಸಿಐ ನಿದೇ೯ಶಕಿ ಡಾ. ಜಯಂತಿ, ಮೆಡಿಸನ್ ವಿಭಾಗದ ಮುಖ್ಯಸ್ಥ ಡಾ. ಕೆ. ರವಿ, ಡಾ. ಅವಿನಾಶ್ ಮತ್ತು ಡಾ. ರಮೇಶ್ ಮತ್ತಿತರರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.