ರಾಜ್ಯ

ಕೊಪ್ಪಳ: ವಿವಾಹಕ್ಕೆ ವಿರೋಧ, ಪ್ರೇಮಿಗಳಿಬ್ಬರೂ ಆತ್ಮಹತ್ಯೆ 

ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೆ.ರಾಂಪುರ ಗ್ರಾಮದಲ್ಲಿ ನಡೆದಿದೆ.

ಕೊಪ್ಪಳ: ವಿವಾಹಕ್ಕೆ ವಿರೋಧ, ಪ್ರೇಮಿಗಳಿಬ್ಬರೂ ಆತ್ಮಹತ್ಯೆ 
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ: ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೆ.ರಾಂಪುರ ಗ್ರಾಮದಲ್ಲಿ ನಡೆದಿದೆ.

ಹೊಲದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಮಾದಾಪುರ ಗ್ರಾಮದ ಹುಲಿಗೆಮ್ಮ (18) ಹಾಗೂ ವಿರೂಪಾಕ್ಷಗೌಡ (20) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರಿಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅನ್ಯ ಜಾತಿ ಆದ ಹಿನ್ನಲೆಯಲ್ಲಿ  ಕುಟುಂಬಸ್ಥರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.