ರಾಜ್ಯ

ಕೋವಿಡ್-19: ಅಂಬ್ಯುಲೆನ್ಸ್, ಮೃತದೇಹದ ಸಾಗಣೆಯ ನಿರ್ವಹಣೆಗಾಗಿ ಪ್ರತ್ಯೇಕ ತಂಡ ರಚನೆ- ವಿಜಯ ಭಾಸ್ಕರ್

ಕೋವಿಡ್-19: ಅಂಬ್ಯುಲೆನ್ಸ್, ಮೃತದೇಹದ ಸಾಗಣೆಯ ನಿರ್ವಹಣೆಗಾಗಿ ಪ್ರತ್ಯೇಕ ತಂಡ ರಚನೆ- ವಿಜಯ ಭಾಸ್ಕರ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೋನಾ ಆಂಬುಲೆನ್ಸ್ ಮತ್ತು ಮೃತದೇಹ ಸಾಗಿಸುವ ವಾಹನಗಳ ವ್ಯವಸ್ಥೆ ನೋಡಿಕೊಳ್ಳಲು ಮೂವರು  ಹಿರಿಯ ಅಧಿಕಾರಿಗಳ ತಂಡವನ್ನು ರಚಿಸಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಆದೇಶ ಹೊರಡಿಸಿದ್ದಾರೆ.

ಈ ತಂಡದಲ್ಲಿ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌. ರವಿಕಾಂತೇ ಗೌಡ, ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ, ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿ ವಿಜಯೇಂದ್ರ ಸದಸ್ಯರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಬ್ಯುಲೆನ್ಸ್ ಕೊರತೆ ಆರೋಪ ಹಾಗೂ ಮೃತದೇಹಗಳ ಸಾಗಣೆ ವೇಳೆ ಲೋಪ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ತಂಡ ರಚಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.