ಮಂಗಳೂರಿನಲ್ಲಿ ಗುಡ್ಡ ಕುಸಿತ; ಹಲವು ಮನೆಗಳು ನೆಲಸಮ, ಮಣ್ಣಿನಡಿ ಸಿಲುಕಿರುವ ಮಕ್ಕಳಿಗಾಗಿ ರಕ್ಷಣಾ ಕಾರ್ಯಾಚರಣೆ
ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿದು ಹಲವು ಮನೆಗಳು ನೆಲಸಮಕೊಂಡಿವೆ. ಇನ್ನು ಮಣ್ಣಿನಡಿಯಲ್ಲಿ ಮಕ್ಕಳಿಬ್ಬರೂ ಸಿಕ್ಕಿ ಹಾಕಿಕೊಂಡಿದ್ದು ಅವರ ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ಸ್ಥಳೀಯರು ನಿರತರಾಗಿದ್ದಾರೆ.

ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿದು ಹಲವು ಮನೆಗಳು ನೆಲಸಮಕೊಂಡಿವೆ. ಇನ್ನು ಮಣ್ಣಿನಡಿಯಲ್ಲಿ ಮಕ್ಕಳಿಬ್ಬರೂ ಸಿಕ್ಕಿ ಹಾಕಿಕೊಂಡಿದ್ದು ಅವರ ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ಸ್ಥಳೀಯರು ನಿರತರಾಗಿದ್ದಾರೆ.
ಬಂಗ್ಲೆಗುಡ್ಡ ಕುಸಿತದಿಂದಾಗಿ ನಾಲ್ಕು ಮನೆಗಳು ನೆಲಸಮಗೊಂಡಿದ್ದು ಕೂಡಲೇ ಪೊಲೀಸರು ಮತ್ತು ಸ್ಥಳೀಯರು ಮನೆಯಲ್ಲಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಮನೆಯಿಂದ ಹೊರಬರುವ ವೇಳೆ ಮಕ್ಕಳನ್ನು ಪೋಷಕರು ಬಿಟ್ಟು ಬಂದಿದ್ದರಿಂದ ಮಕ್ಕಳಿಬ್ಬರು ನೆಲದಡಿ ಸಿಲುಕಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ 30 ಅಡಿ ಕೆಳಕ್ಕೆ ಗುಡ್ಡ ಕುಸಿದಿದೆ. ಕೂಡಲೇ ಪೊಲೀಸರು ಕರ್ಯಾಚರಣೆಗೆ ಮುಂದಾಗಿದ್ದರು.
ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆಯಲಾಗುತ್ತಿದೆ. ಇನ್ನು ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದು ಪೊಲೀಸರಿಗೆ ನೆರವಾಗುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


