ಮಂಗಳೂರು ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಬಾಲಕ-ಬಾಲಕಿ ದುರ್ಮರಣ!
ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿತ ದುರಂತದಲ್ಲಿ ಓರ್ವ ಬಾಲಕ, ಬಾಲಕಿ ದುರ್ಮರಣ ಹೊಂದಿದ್ದಾರೆ.

ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿತ ದುರಂತದಲ್ಲಿ ಓರ್ವ ಬಾಲಕ, ಬಾಲಕಿ ದುರ್ಮರಣ ಹೊಂದಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ 30 ಅಡಿ ಕೆಳಕ್ಕೆ ಗುಡ್ಡ ಕುಸಿದಿತ್ತು. ಈ ವೇಳೆಯಲ್ಲಿ ಅಲ್ಲಿ ನಾಲ್ಕು ಮನೆಗಳು ನೆಲಸಮಗೊಂಡಿದ್ದವು. ಈ ವೇಳೆ ದೊಡ್ಡವರು ಮನೆಯಿಂದ ಹೊರ ಓಡಿ ಬಂದಿದ್ದರು. ಆದರೆ 16 ವರ್ಷದ ಸಫ್ವಾನ್ ಹಾಗೂ 10 ವರ್ಷದ ಸಹಲಾ ಬಾಲಕರಿಬ್ಬರು ಸಿಲುಕಿದ್ದರು.
ಈ ವೇಳೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ನಿರಂತರವಾಗಿ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಇಬ್ಬರ ದೇಹ ಪತ್ತೆಯಾಗಿತ್ತು. ಆದರೆ ಅದಾಗಲೇ ಅವರಿಬ್ಬರೂ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


