ಕನಕಪುರ ಬಂಡೆ ಟೆಂಪಲ್ ರನ್: ಕಾಡಸಿದ್ದೇಶ್ವರ ಮಠಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಡಾ.ಶ್ರೀಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಅವರು, ಆಶೀರ್ವಾದ ಪಡೆದುಕೊಂಡರು.
ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಪಕ್ಷದ ಸಂಘಟನೆ ಮತ್ತು ಪಕ್ಷವನ್ನು ಹೇಗೆ ಅಧಿಕಾರಕ್ಕೆ ತರಬೇಕೆಂಬುದರ ಬಗ್ಗೆ ಶ್ರೀಗಳಿಂದ ಸಲಹೆ, ಮಾರ್ಗದರ್ಶನ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


