ರಾಜ್ಯ

ಜನರ ಸೋಂಕು ಪರೀಕ್ಷೆ ನಡೆಸದ ಕೊಲೆಗಡುಕ ಸರ್ಕಾರ- ಸಿದ್ದರಾಮಯ್ಯ 

ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೊಲೆಗುಡಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಜನರ ಸೋಂಕು ಪರೀಕ್ಷೆ ನಡೆಸದ ಕೊಲೆಗಡುಕ ಸರ್ಕಾರ- ಸಿದ್ದರಾಮಯ್ಯ 
ಸಿದ್ದರಾಮಯ್ಯ
Published On :

ಬೆಂಗಳೂರು: ಸರಿಯಾಗಿ  ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೊಲೆಗುಡಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ?  ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಸರ್ಕಾರ ಕೊರೊನಾ ಸೋಂಕು ಪರೀಕ್ಷೆ ಹೆಚ್ಚು ನಡೆಸಿದರೆ ಇನ್ನಷ್ಟು ಸೋಂಕಿತರ ಸಂಖ್ಯೆ  ಹೆಚ್ಚಾಗುತ್ತದೆ. ಸೋಂಕಿತರ ಸಂಖ್ಯೆ ಗನುಗುಣವಾಗಿ ಅ ಚಿಕಿತ್ಸೆಗೆ ವ್ಯವಸ್ಥೆ  ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ  ಸರ್ಕಾರ ಸಮರ್ಪಕವಾಗಿ  ಸೋಂಕು ಪರೀಕ್ಷೆ ಹೆಚ್ಚು  ನಡೆಸದೇ ಜನರ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಟ್ವೀಟ್  ಮಾಡಿದ್ದಾರೆ.

ರಾಜ್ಯದಲ್ಲಿ ಕೇವಲ 59 ಮಾತ್ರ‌ ಕೋವಿಡ್ ಪರೀಕ್ಷಾ  ಕೇಂದ್ರಗಳಿದ್ದು, ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116 ಮಾತ್ರ. ಪ್ರಸಕ್ತ ಪ್ರತಿದಿನ  ನಡೆಯುತ್ತಿರುವುದು ಕೇವಲ 13, 910 ಪರೀಕ್ಷೆ ಮಾತ್ರ. ಅಂದರೆ‌ ಒಟ್ಟು ಸಾಮರ್ಥ್ಯದ ಶೇಕಡ  44.7 ರಷ್ಟು ಮಾತ್ರ ಬಳಕೆಯಾಗುತ್ತಿದೆ. ಇದು ರಾಜ್ಯ ಸರ್ಕಾರದ ಅಯೋಗ್ಯತೆಗೆ  ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.