ಬೆಂಗಳೂರು: ವೈಟ್‌ಫೀಲ್ಡ್ ವಿಭಾಗದ 15 ಪೊಲೀಸರಿಗೆ ಕೊರೋನಾ ಪಾಸಿಟಿವ್
ಬಂಧಿತ ಆರೋಪಿಗಳಿಂದ ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಡಿಸಿಪಿ ಅನುಚೇತ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಬಂಧಿತ ಆರೋಪಿಗಳಿಂದ ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಡಿಸಿಪಿ ಅನುಚೇತ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಗರದ ವೈಟ್‌ಫೀಲ್ಡ್ ವಿಭಾಗದ ಒಟ್ಟು 15 ಪೊಲೀಸ್ ಸಿಬ್ಬಂದಿಯಲ್ಲಿ ಸೋಮವಾರ ಕೊರೋನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ 12 ಸಿಬ್ಬಂದಿ ಎಚ್ಎಎಲ್ ಠಾಣೆಗೆ ಸೇರಿದ್ದಾರೆ. ಈ ವಿಭಾಗದಲ್ಲಿ ಇಲ್ಲಿಯವರೆಗೆ ಒಟ್ಟು 27 ಪೊಲೀಸ್ ಸಿಬ್ಬಂದಿಗಳಲ್ಲಿ ಕೋವಿಡ್ 19 ಪತ್ತೆಯಾಗಿದ್ದು, ಐದು ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದರು.
ಎಚ್‌ಎಎಲ್ ಠಾಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಕಳೆದ ಜೂ. 27ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. ನಂತರ ಎಲ್ಲಾ ಪೊಲೀಸ್ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 12 ಮಂದಿಗೆ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ ಎಂದು ತಿಳಿಸಿದರು.
ಇನ್ನು, ಎಚ್‌ಎಎಲ್ ಠಾಣೆಯಲ್ಲಿ ಕೊನೆಯದಾಗಿ ಕಳೆದ ತಿಂಗಳ 15ರಂದು ಆರೋಪಿಯೋರ್ವನನ್ನು ಬಂಧಿಸಲಾಗಿತ್ತು. ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ಆದರೆ, ಯಾರೊಬ್ಬರಲ್ಲಿಯೂ ಸೋಂಕು ದೃಢಪಟ್ಟಿಲ್ಲ. ಅಲ್ಲದೇ , ತದನಂತರ ಯಾರೊಬ್ಬರನ್ನು ವಶಕ್ಕೆ ಪಡೆದಿಲ್ಲ. ಆದ್ದರಿಂದ ಬಂಧಿತ ಆರೋಪಿಗಳಿಂದ ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


