ದಿನಬಿಟ್ಟು ದಿನ ಮನೆಯಿಂದ ಕೆಲಸ: ರಾಜ್ಯ ಸರ್ಕಾರಿ ನೌಕರರ ಬೇಡಿಕೆ!
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಿದ್ದಾರೆ.
ಸೋಮವಾರ ವಿಧಾನ ಸೌಧವನ್ನು ಸ್ಯಾನಿಟೈಸ್ ಮಾಡಲಾಯಿತು. ಒಂದೇ ವಾರದಲ್ಲಿ 2ನೇ ಬಾರಿ ಸ್ಯಾನಿಟೈಸ್ ಮಾಡಲಾಗಿದೆ, ಸರ್ಕಾರಿ ನೌಕರರು ಕೊರೋನಾ ಹಿನ್ನೆಲೆಯಲ್ಲಿ ಪದೇ ಪದೇ ರಜೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹಾಜರಾತಿ ಪ್ರಮಾಣ ಕೂಡ ಕಡಿಮೆಯಾಗಿದೆ,
ವಿಧಾನ ಸೌಧ ಮತ್ತು ವಿಕಾಸ ಸೌಧ ಸಿಬ್ಬಂದಿಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಭಾಗಶಃ ಬಂದ್ ಮಾಡಲಾಗಿತ್ತು. ರಾಜ್ದಲ್ಲಿ 5 ಲಕ್ಷ ಸರ್ಕಾರಿ ನೌಕರರಿದ್ದು, ಹಲವು ಮಂದಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ನೌಕರರು ಸೋಂಕು ಉಂಟಾಗುವ ಭಯದಲ್ಲಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.
ಪರ್ಯಾಯ ದಿನಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಅಂದರೆ ದಿನ ಬಿಟ್ಟು ದಿನ ವರ್ಕ್ ಫ್ರಮ್ ಹೋಮ್ ಗೆ ಅವಕಾಶ ನೀಡಬೇಕು ಎಂದು ನೌಕರರ ಸಂಘ ರಾಜ್ಯ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದಿದೆ.
ದಿನ ಬಿಟ್ಟು ದಿನ ಕಚೇರಿಗೆ ಕೆಲಸಕ್ಕೆ ಬರುವಂತೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದೆ. ಈಗ ನಾವು ಇ-ಆಡಳಿತವನ್ನು ಅಳವಡಿಸಿಕೊಂಡಿದ್ದೇವೆ, ನಮ್ಮಲ್ಲಿ ಇ-ಫೈಲ್‌ಗಳಿವೆ ಮತ್ತು ಸಿಬ್ಬಂದಿ ಮನೆಯಿಂದ ಕೆಲಸ ಮಾಡಬಹುದು. ತಮಿಳುನಾಡಿನಲ್ಲಿ ಇದೇ ರೀತಿಯ ಕಾರ್ಯವಿಧಾನವಿದೆ, ಅಲ್ಲಿ ಅಂಡರ್ ಸೆಕ್ರೆಟರಿ ಮತ್ತು ಅದಕ್ಕಿಂತ ಹೆಚ್ಚಿನ ಹಿರಿಯ ಅಧಿಕಾರಿಗಳು ಮಾತ್ರ ಕಚೇರಿಗೆ ಹೋಗುತ್ತಾರೆ, ನೌಕರರು ಪರ್ಯಾಯ ದಿನಗಳಲ್ಲಿ ಕೆಲಸ ಮಾಡುತ್ತಾರೆ, ’’ ಎಂದು ಪತ್ರದಲ್ಲಿ ಬರೆದಿದ್ದಾರೆ. 55 ವರ್ಷ ಮೇಲ್ಪಟ್ಟ ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಸಹ ಮನವಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


