ಗುತ್ತಿಗೆ ಆಧಾರದ ಮೇಲೆ ನೀಡಿದ ಸರ್ಕಾರಿ ಜಮೀನು ಖಾಯಂ ಆಗಿ ಮಂಜೂರು ಮಾಡಲು ಆದೇಶ
ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸರ್ಕಾರಿ ಜಮೀನುಗಳನ್ನು ಗುತ್ತಿಗೆ ಪಡೆದ ಸಂಸ್ಥೆಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸರ್ಕಾರಿ ಜಮೀನುಗಳನ್ನು ಗುತ್ತಿಗೆ ಪಡೆದ ಸಂಸ್ಥೆಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 19ರಡಿಯಲ್ಲಿ ಸರ್ಕಾರಿ ಜಮೀನುಗಳನ್ನು ವಿವಿಧ ಉದ್ದೇಶಗಳಿಗೆ ಗರಿಷ್ಠ 30 ವರ್ಷಗಳ ಗುತ್ತಿಗೆ ಅವಧಿಗೆ ನೀಡಲು ಕಳೆದ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯು ಮುಕ್ತಾಯವಾದ ನಂತರ ಗುತ್ತಿಗೆ ಅವಧಿಯನ್ನು ಸಂಸ್ಥೆಯ ಪರಿಸ್ಥಿತಿಗೆ ಅನುಗುಣವಾಗಿ ಕೋರಿಕೆಯ ಮೇರೆಗೆ ಇನ್ನೂ 5 ವರ್ಷಗಳ ಕಾಲ ನವೀಕರಿಸಲು ಜಿಲ್ಲಾಧಿಕಾರಿಯವರಿಗೆ ಅಧಿಕಾರವಿದೆ. ಹಿಂದಿನಿಂದಲೂ ಕಂದಾಯ ಇಲಾಖೆಯ ಒಡೆತನದ ಸರ್ಕಾರಿ ಜಮೀನುಗಳನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಕೋರಿಕೆ ಮೇರೆಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ನೀಡಲಾಗುತ್ತಿದೆ.
ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಯುವ ದೃಷ್ಟಿಯಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಯಲ್ಲಿರಿಸಬೇಕಾಗಿರುವುದರಿಂದ ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧೋದ್ದೇಶಗಳಿಗೆ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು, ಅದೇ ಉದ್ದೇಶಕ್ಕೆ ಖಾಯಂ ಮಂಜೂರಾತಿ ಕೋರಿದ್ದರೆ, ಪ್ರಸ್ತುತ ಮಾರ್ಗಸೂಚಿ ಮೌಲ್ಯವನ್ನು ವಿಧಿಸಲು, ಅನ್ಯ ಉದ್ದೇಶಕ್ಕೆ ಖಾಯಂ ಮಂಜೂರಾತಿ ಕೋರಿದ್ದಲ್ಲಿ, ಮಾರ್ಗಸೂಚಿ ಮೌಲ್ಯದ ಎರಡು ಪಟ್ಟು ಮೊತ್ತವನ್ನು ವಿಧಿಸಿ ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಖಾಯಂ ಮಂಜೂರು ಮಾಡುವ ಮೂಲಕ ಸಂಪನ್ಮೂಲ ಕ್ರೊಡೀಕರಿಸಲು ಉದ್ದೇಶಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


