ಜೆಡಿಎಸ್ ಎಂಎಲ್ ಸಿ ಬೋಜೇಗೌಡರಿಗೆ ಕೊರೋನಾ ಸೋಂಕು
ಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೆಗೌಡರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ, ಇತ್ತೀಚೆಗಷ್ಟೇ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೇಗೌಡ ಕೊರೋನಾ ಪರೀಕ್ಷೆ ತಪಾಸಣೆಗೊಳಗಾಗಿದ್ದರು.

ಬೆಂಗಳೂರು: ಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೆಗೌಡರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ, ಇತ್ತೀಚೆಗಷ್ಟೇ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೇಗೌಡ ಕೊರೋನಾ ಪರೀಕ್ಷೆ ತಪಾಸಣೆಗೊಳಗಾಗಿದ್ದರು. ಈಗ ಬೋಜೇಗೌಡರ ಕೊರೋನಾ ರಿಪೋರ್ಟ್ ಬಂದಿದ್ದು, ಸೋಂಕು ಇರುವುದು ಧೃಡಪಟ್ಟಿದೆ.
ಹೀಗಾಗಿ ಇವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರಿಸಿ ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದ ನಿಯಮದ ಪ್ರಕಾರ ಬೋಜೆಗೌಡ 14 ದಿನ ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾಗಿದೆ. ಅಲ್ಲಿಯತನಕ ತಮ್ಮ ಆರೋಗ್ಯದ ಬಗ್ಗೆ ಮಾತ್ರ ಗಮನಹರಿಸಬೇಕಿದೆ.
ಏನಾದರೂ ಸಮಸ್ಯೆ ಇದ್ದರೆ ಕೂಡಲೇ ವೈದ್ಯರ ಗಮನಕ್ಕೆ ತರಬೇಕಿದೆ. ಕ್ಷೇತ್ರದ ಜನ, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಫೋನ್ನಲ್ಲಿ ಮಾತ್ರ ಸಂಪರ್ಕಕ್ಕೆ ಸಿಗಬಹುದು. ಎರಡು ವಾರಗಳ ಕಾಲ ಯಾರ ಭೇಟಿಗೂ ಅವಕಾಶವಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


