ರಾಜ್ಯ

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದಂಪತಿಗೆ ಕೊರೋನಾ ದೃಢ 

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಅವರುಗಳಿಗೆ ಕೊರೋನಾವೈರಸ್ ಸೋಂಕು ದೃಢವಾಗಿದೆ..

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದಂಪತಿಗೆ ಕೊರೋನಾ ದೃಢ 
ಶರತ್ ಬಚ್ಚೇಗೌಡ
Published On :

ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಅವರುಗಳಿಗೆ ಕೊರೋನಾವೈರಸ್ ಸೋಂಕು ದೃಢವಾಗಿದೆ..

ಈ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಟ್ವೀಟ್ ಮೂಲಕ ಸ್ವಯಂ ಹೇಳಿಕೊಂಡಿದ್ದಾರೆ.

"ಜುಲೈ 6 ಸೋಮವಾರ ದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಒಳಗಾಗಿದ್ದು ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ನಿಮಗೆ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಆದರೂ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ.

"ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ.

"ರೋಗ ನಿರೋಧಕ ಶಕ್ತಿಯು ನಮ್ಮಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ." ಎಂದು ಶಾಸಕರು ಟ್ವೀಟ್ ಮೂಲಕ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.