ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಇಬ್ಬರು ಆರೋಪಿಗಳ ಬಂಧನ
ವೇಶ್ಯಾವಾಟಿಕೆ ಅಡ್ಡೆ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಘಟನೆಯ ಯಶವಂತಪುರದಲ್ಲಿ ನಡೆದಿದೆ.

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಘಟನೆಯ ಯಶವಂತಪುರದಲ್ಲಿ ನಡೆದಿದೆ.
ಯಶವಂತಪುರದ ಗೆಸ್ಟ್ ಗೌಸ್ ವೊಂದರಲ್ಲಿ ಮಾಂಸದಂಧೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಐವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಕಲೆದ ವಾರ ಕೂಡ ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 27 ಮಹಿಳೆಯರನ್ನು ರಕ್ಷಣೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


