ರಾಜ್ಯ

ಕೋವಿಡ್-19 ನಿಯಂತ್ರಣಕ್ಕೆ ರಾಜ್ಯಮಟ್ಟದ ಕಾರ್ಯಪಡೆ ರಚನೆ 

ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಸರ್ಕಾರ ಆದೇಶಿಸಿದೆ.

ಕೋವಿಡ್-19 ನಿಯಂತ್ರಣಕ್ಕೆ ರಾಜ್ಯಮಟ್ಟದ ಕಾರ್ಯಪಡೆ ರಚನೆ 
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲಗಳನ್ನು ಅದರಲ್ಲೂ ಪ್ರಮುಖವಾಗಿ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಇತರ ಸಿಬ್ಬಂದಿಗಳನ್ನು ಒದಗಿಸುವುದು ಅತ್ಯಂತ ಪ್ರಮುಖವಾಗಿರುವುದನ್ನು ಸರ್ಕಾರವು ಗಮನಿಸಿರುವ ಹಿನ್ನೆಲೆಯಲ್ಲಿ  ರಾಜ್ಯ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ -19 ನ್ನು ಸಾಂಕ್ರಮಿಕ ರೋಗವೆಂದು ಘೋಷಿಸಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಹಲವಾರು ನಿರ್ದೇಶನ  ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಅದರನ್ವಯ ರಾಜ್ಯ ಸರ್ಕಾರ ಈ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು,ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ  ಈಗಾಗಲೇ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಮಟ್ಟದ ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸೀಮಿತವಾಗಿ ಹಲವಾರು ಕಾರ್ಯ ತಂಡಗಳನ್ನು ರಚಿಸಿ ಆದೇಶಿಸಿದೆ .

ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲಗಳನ್ನು ಅದರಲ್ಲಿಯೂ ಪ್ರಮುಖವಾಗಿ ವೈದ್ಯಕೀಯ , ಅರೆ ವೈದ್ಯಕೀಯ ಹಾಗೂ ಇತರ ಸಿಬ್ಬಂದಿಗಳನ್ನು ಒದಗಿಸುವುದು ಅತ್ಯಂತ ಪ್ರಮುಖವಾಗಿರುವುದನ್ನು ಸರ್ಕಾರ ಪರಿಗಣಿಸಿದ್ದು, ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಮಟ್ಟದ ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸೀಮಿತವಾಗಿ ಹಲವಾರು ಕಾರ್ಯ ತಂಡಗಳನ್ನು ರಚಿಸಿ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.