ದರೋಡೆಗೆ ಸಂಚು ರೂಪಿಸಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಮೂವರು ಆರೋಪಿಗಳ ಬಂಧನ
ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿನಾಯಕ್ ನಗರದ ಲಕ್ಷ್ಮೀಕಾಂತ್ (20), ಹೆಸರಘಟ್ಟ ನಿವಾಸಿ ಆನಂದ್ (20), ಚಿಕ್ಕ ಬಿದರುಕಲ್ಲು ನಿವಾಸಿ ರಾಕೇಶ್ (21) ಬಂಧಿತರು. ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಹೆಸರಘಟ್ಟ ಕೆರೆ ಬಳಿ ಐವರ ಗುಂಪೊಂದು ದರೋಡೆ ಮಾಡಲು ಸಂಚು ರೂಪಿಸಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಗಸ್ತಿನಲ್ಲಿದ್ದ ಸೋಲದೇವನಹಳ್ಳಿ ಪಿಎಸ್ಐ ವಸಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಇಮಾಮ್ ಸಾಬ್ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದರು.
ಈ ವೇಳೆ ಲಾಂಗ್, ಡ್ಯಾಗರ್, ಚಾಕು ಹಾಗೂ ದೊಣ್ಣೆಗಳನ್ನು ಹಿಡಿದು ನಿಂತಿದ್ದ ದರೋಡೆಕೋರರ ತಂಡ, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದೆ. ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಹೆಸರಘಟ್ಟ ಕೆರೆ ಬಳಿ ಐವರ ಗುಂಪೊಂದು ದರೋಡೆಗೆ ಸಂಚು ರೂಪಿಸಿ ಸಜ್ಜಾಗಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸೋಲದೇವನಹಳ್ಳಿ ಪಿಎಸ್ಐ ವಸಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಇಮಾಮ್ ಸಾಬ್ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


