ರಾಜ್ಯ

ತಹಸೀಲ್ದಾರ್ ಹತ್ಯೆ: 25 ಲಕ್ಷ ರೂ. ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಮುಖ್ಯಮಂತ್ರಿ ಆದೇಶ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಕರ್ತವ್ಯ ನಿರತ ಸಂದರ್ಭದಲ್ಲಿ ಹತ್ಯೆಯಾಗಿದ್ದು, ಈ ಸಂಬಂಧ ಸರ್ಕಾರಿ ನೌಕರರಿಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ತಹಸೀಲ್ದಾರ್ ಹತ್ಯೆ: 25 ಲಕ್ಷ ರೂ. ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಮುಖ್ಯಮಂತ್ರಿ ಆದೇಶ
ತಹಸೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ
Published On :

ಬೆಂಗಳೂರು: ಕರ್ತವ್ಯ ನಿರತ ಸಂದರ್ಭದಲ್ಲಿ ಹತ್ಯೆಯಾಗಿರುವ ಕೋಲಾರ ಜಿಲ್ಲೆ ಬಂಗಾರ ಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರ ಮೌಳೇಶ್ವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ  ನೆರವೇರಿಸಬೇಕು  ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಪರಿಹಾರ  ಹಾಗೂ ಬಿ.ಕೆ.ಚಂದ್ರಮೌಳೇಶ್ವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿಯನ್ನು ನೀಡಲು  ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಆರೋಪಿಗಳ ವಿರುದ್ಧ  ಕಾನೂನಿನಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.