ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ
ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.

ಬೆಂಗಳೂರು: ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.
ಕೋವಿಡ್ -19 ಸೋಂಕು ಹರಡುವಿಕೆಯನ್ನು ನಿಯಂತ್ರಣ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಕಚೇರಿಗಳಿಗೆ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ ಎಲ್ಲಾ ಶನಿವಾರಗಳಂದು ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ. ಈ ರಜೆಯು ಕೋವಿಡ್ -19 ಕಾರ್ಯಕ್ಕೆ ನಿಯುಕ್ತರಾಗಿರುವ ಶಿಕ್ಷಕರು, ಅಧಿಕಾರಿ ಸಿಬ್ಬಂದಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು ಅಧಿಕಾರಿ ಸಿಬ್ಬಂದಿಯವರಿಗೆ, ಅನ್ವಯವಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


