ಫೇಸ್ಬುಕ್ ಪರಿಚಯ ತಂದ ಆಪತ್ತು: ತಿರುಚಿದ ನಗ್ನ ವಿಡಿಯೋ ತೋರಿಸಿ ಯುವತಿಯಿಂದ ಯುವಕನಿಗೆ ಬ್ಲ್ಯಾಕ್ ಮೇಲ್
ಫೇಸ್ ಬುಕ್ ನಲ್ಲಿ ಯುವತಿಯೊಬ್ಬಳಿಂದ ಬಂದ ಫ್ರೆಂಡ್ ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದ ಯುವಕನೊಬ್ಬ ಸಂಕಷ್ಟ ಎದುರಿಸುವಂತಾಗಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಯೊಬ್ಬಳು ಯುವಕನಿಗೆ ತಿರುಚಿದ ನಗ್ನ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ಫೇಸ್ ಬುಕ್ ನಲ್ಲಿ ಯುವತಿಯೊಬ್ಬಳಿಂದ ಬಂದ ಫ್ರೆಂಡ್ ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದ ಯುವಕನೊಬ್ಬ ಸಂಕಷ್ಟ ಎದುರಿಸುವಂತಾಗಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಯೊಬ್ಬಳು ಯುವಕನಿಗೆ ತಿರುಚಿದ ನಗ್ನ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಪಾಯಲ್ ಕುಮಾರಿ ಎಂಬ ಯುವತಿಯೊಬ್ಬಳು 31 ವರ್ಷದ ಯುವಕನೊಬ್ಬನಿಗೆ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾಳೆ. ಯುವಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಂತೆಯೇ ಆಕ್ಸೆಪ್ಟ್ ಮಾಡಿದ್ದಾನೆ. ಬಳಿಕ ಯುವಕನೊಂದಿಗೆ ಚಾಟ್ ಮಾಡಿದ ಯುವತಿ ನಂತರ ಆತನ ಫೋನ್ ನಂಬರ್ ಪಡೆದುಕೊಂಡು ವಾಟ್ಸ್ ಆ್ಯಪ್ ಮೂಲಕ ವಿಡಿಯೋ ಕಾಲ್ ಮಾಡಿದ್ದಾಳೆ.
ಬಳಿಕ ನಗ್ನಗೊಂಡು ಯುವಕನನ್ನೂ ಬಟ್ಟೆ ತೆಗೆಯುವಂತೆ ತಿಳಿಸಿದ್ದಾಳೆ. ಇದಕ್ಕೆ ನಿರಾಕರಿಸಿದ ಯುವಕ ಕೂಡಲೇ ಫೋನ್ ಡಿಸ್ಕನೆಕ್ಟ್ ಮಾಡಿದ್ದಾನೆ. ಇದಾದ ಕೆಲವೇ ನಿಮಿಷಗಳಲ್ಲಿ ಯುವಕನು ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದನ್ನೇ ತಿರುಚಿ ನಗ್ನಗೊಳಿಸಿ ಯುವಕನನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾಳೆ.
ಜೂನ್.3ರಂದು ಘಟನೆ ನಡೆದಿದ್ದು, ಈ ಸಂಬಂಧ ಯುವಕ ಕೆಆರ್.ಪುರಂ ಪೊಲೀಸ್ ಠಆಣೆಯಲ್ಲಿ ದೂರು ದಾಖಲಿಸಿದ್ದಾನೆ. ಪ್ರಕಱಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಯುವತಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


