ರಾಜ್ಯ

ಕೋವಿಡ್ ಕುರಿತ ಜಾಹೀರಾತು ಫಲಕ ಲಗತ್ತಿಸಲು ಹೈಕೋರ್ಟ್ ಅನುಮತಿ ಕೋರಿದ ಸರ್ಕಾರ

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚಳದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಪಲಕಗಳ ಅಳವಡಿಕೆ ಕುರಿತು ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಕೋವಿಡ್ ಕುರಿತ ಜಾಹೀರಾತು ಫಲಕ ಲಗತ್ತಿಸಲು ಹೈಕೋರ್ಟ್ ಅನುಮತಿ ಕೋರಿದ ಸರ್ಕಾರ
ಹೈಕೋರ್ಟ್
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚಳದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಪಲಕಗಳ ಅಳವಡಿಕೆ ಕುರಿತು ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್  ಸೂಚನೆ ನೀಡಿದೆ.

ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಫಲಕ ಲಗತ್ತಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಜಾಹೀರಾತು ಫಲಕಗಳಿಗೆ ಯಾವ ಬಗೆಯ ಪರಿಕರ ಬಳಸಲಾಗುತ್ತದೆ, ಯಾವ್ಯಾವ ಜಾಗದಲ್ಲಿ ಎಷ್ಟು ಅಳತೆಯ ಹೋರ್ಡಿಂಗ್ಸ್ ಅಳವಡಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ಇದೇ 14ಕ್ಕೆ ವಿಚಾರಣೆ ಮುಂದೂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.