ಚಿತ್ರದುರ್ಗ, ಚಾಮರಾಜನಗರದಲ್ಲಿ ಕೊರೊನಾಗೆ ಮೊದಲ ಬಲಿ, ರಾಜ್ಯಾದ್ಯಂತ ಇಂದು 70 ಸಾವು
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 70 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 613ಕ್ಕೇರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 70 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 613ಕ್ಕೇರಿಕೆಯಾಗಿದೆ.
ಇಂದು ರಾಜ್ಯದಲ್ಲಿ ಒಟ್ಟು 2,798 ಜನಕ್ಕೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದ್ದು, ಇತ್ತ ಮಹಾನಗರಿ ಬೆಂಗಳೂರಿನಲ್ಲೂ ಕೊರೋನಾದ ರೌದ್ರ ನರ್ತನ ಮುಂದುವರಿದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದೇ ದಿನ 1,533 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 1,533, ದಕ್ಷಿಣ ಕನ್ನಡ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ 65, ಬಳ್ಳಾರಿ 65, ಬೀದರ್ 63, ವಿಜಯಪುರ 48, ಉತ್ತರ ಕನ್ನಡ 40, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ 23, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ 12, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ 3 ಮತ್ತು ಚಿಕ್ಕಮಗಳೂರಿನಲ್ಲಿ 3 ಪ್ರಕರಣಗಳು ಬೆಳಕಿಗೆ ಬಂದಿವೆ.
ಇಂದು 880 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 504 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಒಟ್ಟು 70 ಜನರು ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ 613 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು 36,216 ಪ್ರಕರಣಗಳಲ್ಲಿ 20,883 ಸಕ್ರಿಯ ಕೇಸ್ ಗಳಿವೆ.
ಚಿತ್ರದುರ್ಗ, ಚಾಮರಾಜನಗರದಲ್ಲಿ ಕೊರೋನಾಗೆ ಮೊದಲ ಬಲಿ, ರಾಜ್ಯಾದ್ಯಂತ ಇಂದು 70 ಸಾವು
ಚಿತ್ರದುರ್ಗ ಮತ್ತು ಚಾಮರಾಜನಗರದಲ್ಲಿ ಕೊರೋನಾಗೆ ಮೊದಲ ಬಲಿಯಾಗಿದ್ದು, ಚಿತ್ರದುರ್ಗದಲ್ಲಿ ಹಿರಿಯೂರು ಮೂಲದ 75 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಗನ ಪ್ರಾಥಮಿಕ ಸಂಪರ್ಕದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇಂದು ಹಿರಿಯೂರಿನ ನಾಲ್ವರಿಗೆ ಹಾಗೂ ಚಿತ್ರದುರ್ಗದ ಓರ್ವ ಸೇರಿದಂತೆ ಒಟ್ಟು ಐವರಿಗೆ ಸೋಂಕು ತಗುಲಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಹಿರಿಯೂರಿನ 56 ವರ್ಷದ ಪುರುಷ, 44 ವರ್ಷದ ಮಹಿಳೆ, 54 ವರ್ಷದ ಮಹಿಳೆ, 22 ವರ್ಷದ ಪುರುಷ ಹಾಗೂ ಚಿತ್ರದುರ್ಗದ 39 ವರ್ಷದ ಪುರುಷ ಸೇರಿದಂತೆ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಂತೆಯೇ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ದಿನೇ ದಿನೇ ಕೊರೊನಾ ಅರ್ಭಟ ಹೆಚ್ಚಾಗುತ್ತಿದ್ದು, ಮಹಾಮಾರಿ ಜಿಲ್ಲೆಯಲ್ಲಿ ಇಂದು ಮೊದಲ ಬಲಿ ಪಡೆದಿದೆ. ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ 58 ವರ್ಷದ ವ್ಯಕ್ತಿ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಉಸಿರಾಟ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದರು. ಚಾಮರಾಜನಗರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸಂಖ್ಯೆ 163ಕ್ಕೆ ಹೆಚ್ಚಾಗಿದ್ದು, ಪ್ರಸ್ತುತ 86 ಸಕ್ರಿಯ ಪ್ರಕರಣಗಳಿವೆ. ಡಿಸ್ಚಾರ್ಜ್ ಆದವರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ.
ಗಡಿ ಜಿಲ್ಲೆ ಬೀದರ್ ನಲ್ಲಿ ಕೊರೊನಾಗೆ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಉಸಿರಾಟ ಹಾಗೂ ಜ್ವರದಿಂದ ಬಳಲುತ್ತಿದ್ದ ಬೀದರ್‍ನ ಓಲ್ಡ್ ಸಿಟಿಯ 40 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೆ ಇಂದು 63 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡವಾಗಿವೆ. ಹುಮ್ನಬಾದ್ 39, ಬಾಲ್ಕಿ 8, ಕಮಲಾನಗರ 8, ಔರಾದ್ 4, ಬಸವಕಲ್ಯಾಣದಲ್ಲಿ 4 ಸೇರಿದಂತೆ ಒಟ್ಟು 63 ಜನರಿಗೆ ಸೋಂಕು ತಗುಲಿದೆ.
Related Article
ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ: ಎಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರಿನಲ್ಲಿ ಲಾಕ್ಡೌನ್: ಯಾವೆಲ್ಲಾ ಸೇವೆಗಳು ಲಭ್ಯ, ಯಾವ ಸೇವೆಗಳು ಇರುವುದಿಲ್ಲ..! ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಮಂಗಳವಾರದಿಂದ 7 ದಿನ ಲಾಕ್ಡೌನ್ ಜಾರಿ: ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯದ 18 ಕೋವಿಡ್ ಆಸ್ಪತ್ರೆಗಳಿಗೆ ಒಟ್ಟು 810 ಸಿಬ್ಬಂದಿ ನಿಯೋಜನೆಗಾಗಿ ಸರ್ಕಾರ ಅನುಮೋದನೆ
ಕೋವಿಡ್ -19: ಮೈಸೂರಿನ ಹೊರವಲಯದಲ್ಲಿ 600 ಹಾಸಿಗೆಗಳ ಆಸ್ಪತ್ರೆ ಸಿದ್ಧ
ರಾಜ್ಯದಲ್ಲಿ ಇಂದು ಕೊರೋನಾಗೆ 70 ಬಲಿ, ಬೆಂಗಳೂರಿನಲ್ಲಿ 1533 ಸೇರಿ 2798 ಮಂದಿಗೆ ಪಾಸಿಟಿವ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


