ರಾಜ್ಯ

ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ: ಎಚ್ ಡಿ ಕುಮಾರಸ್ವಾಮಿ ಒತ್ತಾಯ

ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ: ಎಚ್ ಡಿ ಕುಮಾರಸ್ವಾಮಿ ಒತ್ತಾಯ
ಎಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಬೆಂಬಲಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.