ಕೊರೋನಾ: ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್, ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ ಎಂದ ಸಚಿವ ಸಿಟಿ ರವಿ
ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಭಾನುವಾರ ಮೂರನೇ ಬಾರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ.

ಚಿಕ್ಕಮಗಳುರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಭಾನುವಾರ ಮೂರನೇ ಬಾರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವರು "ಒಂದು ವಾರದೊಳಗಿನ ಎರಡು ಟೆಸ್ಟ್ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿದೆ, ಅದಕ್ಕಾಗಿ ನಾನು ಇಂದು 3ನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ" ಎಂದಿದ್ದಾರೆ.
ಇದಲ್ಲದೆ "ಬೆಳಿಗ್ಗೆ ಸೂರ್ಯ ನಮಸ್ಕಾರ, ಅರ್ಧಕಟಿ ಚಕ್ರಾಸನ, ನಾಡಿಶುದ್ದಿ ಕ್ರಿಯೆಗಳು, ಅನುಲೋಮ ವಿಲೋಮ ಪ್ರಾಣಾಯಾಮ ಪೂರ್ಣಗೊಳಿಸಿದ್ದೇನೆ. ಒಂದು ಗಂಟೆಯ ವಿವಿಧ ಯೋಗಾಭ್ಯಾಸದ ನಂತರ 10 ನಿಮಿಷ ಶವಾಸನ ಹಾಕಿದ್ದೇನೆ. ಮೇಲ್ನೋಟಕ್ಕೆ ಯಾವುದೇ ವ್ಯತ್ಯಾಸ ನನಗೆ ಗೊತ್ತಾಗಿಲ್ಲ" ಎಂದೂ ಹೇಳಿಕೊಂಡಿದ್ದಾರೆ.
ಇದಕ್ಕೆ ಹಿಂದೆ ತಮಗೆ ಕೊರೋನಾ ದೃಢಪಟ್ಟಿರುವ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಸಿಟಿ ರವಿ , ''ನಾನು ಕ್ಷೇಮವಗಿದ್ದೇನೆ. ಕೊರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ'' ಎಂದು ಹೇಳಿದ್ದರು.
ಒಂದು ವಾರದೊಳಗಿನ ಎರಡು ಟೆಸ್ಟ್ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿದೆ, ಅದಕ್ಕಾಗಿ ನಾನು ಇಂದು 3ನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ.
— C T Ravi
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


