ರಾಜ್ಯದಲ್ಲಿ ಮುಂದಿನ 15 ರಿಂದ 30 ದಿನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಡಬಲ್: ಸಚಿವ ಶ್ರೀರಾಮುಲು
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮುಂದಿನ 15 ರಿಂದ 30 ದಿನದಲ್ಲಿ ಸೋಂಕಿತರ ಸಂಖ್ಯೆ ಡಬಲ್ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮುಂದಿನ 15 ರಿಂದ 30 ದಿನದಲ್ಲಿ ಸೋಂಕಿತರ ಸಂಖ್ಯೆ ಡಬಲ್ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವರು, ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನಗಳ ಕಾಲ ಬೆಂಗಳೂರಿನಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಎಲ್ಲರೂ ನಿಯಮಗಳನ್ನು ಪಾಲಿಸಿ. ರಾಜ್ಯದಲ್ಲಿ ಈಗ ದಿನವೊದಕ್ಕೆ 2000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ಮುಂದಿನ 15 ರಿಂದ 30 ದಿನಗಳಲ್ಲಿ ಇದು ದ್ವಿಗುಣವಾಗಬಹುದು. ಮುಂದಿನ 2 ತಿಂಗಳು ನಮಗೆ ಅತಿ ದೊಡ್ಡ ಸವಾಲಾಗಲಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಆದರೂ ಇದರಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ಭಯ ಪಡುವ ಅಗತ್ಯ ಇಲ್ಲ. ಸರ್ಕಾರ ಸೋಂಕು ತಡೆಯುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮತ್ತೊಂದು ಟ್ವೀಟ್ ನಲ್ಲಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


