ಸೋಂಕಿತರಿಗೆ ಸೂಕ್ತ ಚಿಕಿತ್ಸೆ,ರೋಗ ಲಕ್ಷಣ ಪತ್ತೆಗಾಗಿ ತುರ್ತು ಸಹಾಯವಾಣಿ ಆರಂಭಿಸಲು ಸೂಚನೆ: ಡಾ.ಸುಧಾಕರ್
ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಿವುದು.ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ ಮಾಡಿ ಕೊಳ್ಳುವಂತೆ ಸಚಿವ ಡಾ.ಸುಧಾಕರ್ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಬೆಂಗಳೂರು: ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಿವುದು.ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ ಮಾಡಿ ಕೊಳ್ಳುವಂತೆ ಸಚಿವ ಡಾ.ಸುಧಾಕರ್ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲು ವಿಡಿಯೋ ಕಾನ್ಫರೆನ್ಸ್ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಚೆರ್ಚೆ ನಡೆಸಿದರು.ಈ ವೇಳೆ ಮಾತನಾಡಿದ ಅವರು, ಸೋಂಕು ಧೃಢಪಟ್ಟವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕಗಳಿಗೆ ಮಾಹಿತಿ ನೀಡಲು,ರೋಗ ಲಕ್ಷಣವಿರುವ ಸೋಂಕಿತರ ಪತ್ತೆಗಾಗಿ,ರೋಗಲಕ್ಷಣ ವಿಲ್ಲದ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ ಮತ್ತು ರೋಗಲಕ್ಷಣವಿದ್ದವರಿಗೆ ಆಸ್ಪತ್ರೆ,ಆ್ಯಂಬುಲೆನ್ಸ್ ಸಂಯೋಜನೆಗಾಗಿ ಮತ್ತು ಇತರೆ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ತುರ್ತು ಸಹಾಯವಾಣಿ ಆರಂಭಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ರಾಪಿಡ್ ಆಂಟಿಜೆನ್ ಟೆಸ್ಟ್ ಅವಶ್ಯಕತೆ ಇರುವ ಕ್ಲಸ್ಟರ್ ಗಳನ್ನು ಗುರುತಿಸಲು ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಲು ಸೂಚಿಸಲಾ ಗಿದೆ.ಅಲ್ಲದೆ ರೋಗಿಗಳನ್ನು ದಾಖಲಿಸಿಕೊಳ್ಳಲು ಇರುವ ಗೊಂದಲ ನಿವಾರಿಸಲು ಆಸ್ಪತ್ರೆಗಳಲ್ಲಿ ಆಂಟಿಜೆನ್ ಟೆಸ್ಟ್ ವ್ಯವಸ್ಥೆ ಕಲ್ಪಿಸು ವುದು.RT-PCR ಪರೀಕ್ಷೆಯ ಸ್ಯಾಂಪಲ್ ಗಳನ್ನು ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ಪರೀಕ್ಷಾ ವರದಿ ವಿಳಂಬವಾಗದಂತೆ ಕ್ರಮ ಕೈಗೊಳಲು ನಿರ್ದೇಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


