ಕೋವಿಡ್ ನಿಯಂತ್ರಣ ಹಿನ್ನೆಲೆ; ಎಲ್ಲಾ ವಿಭಾಗದ ವರ್ಗಾವಣೆ ಸ್ಥಗಿತಗೊಳಿಸಿದ ಬಿಬಿಎಂಪಿ
ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿಯ ಎಲ್ಲ ವೃಂದಗಳ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿಯ ಎಲ್ಲ ವೃಂದಗಳ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿದ್ದು, ಪಾಲಿಕೆಯ ನೌಕರರು ಹಾಗೂ ಅಧಿಕಾರಿಗಳನ್ನು ಈಗಾಗಲೇ ಕೊರೊನಾ ನಿಯಂತ್ರಣ ಕರ್ತವ್ಯಗಳಿಗೆ ನಿಯೋಜಿಸಲಾಗಿದೆ. ಹಾಗಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುತ್ತೋಲೆ ತಿಳಿಸಿದೆ. ಕೊರೊನಾ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಪಾಲಿಕೆಯ ನೌಕರರು ಹಾಗೂ ಅಧಿಕಾರಿಗಳನ್ನು ಈಗಾಗಲೇ ಕೊರೊನಾ ಸೋಂಕು ನಿಯಂತ್ರಣ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದರೆ ಸೋಂಕು ನಿಯಂತ್ರಣ ಕಾರ್ಯಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಸಂದರ್ಭಾನುಸಾರ ಅಧಿಕಾರಿಗಳನ್ನು ಅಥವಾ ನೌಕರರನ್ನು ವರ್ಗಾವಣೆ ಮಾಡುವ ವಿಶೇಷ ಅಧಿಕಾರ ಆಯುಕ್ತರಿಗೆ ಇದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


