ವಾರದ ಲಾಕ್‌ಡೌನ್: ವಲಸೆ ಕಾರ್ಮಿಕರು ಸ್ವಂತ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ರಾಜಧಾನಿಯಲ್ಲಿ ವಾರದ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

ಬೆಂಗಳೂರು: ರಾಜಧಾನಿಯಲ್ಲಿ ವಾರದ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.
ಕೆಎಸ್‌ಆರ್‌ಟಿಸಿ ಈಗಾಗಲೇ ರಾಜ್ಯ ರಾಜಧಾನಿಯಿಂದ 249 ಹೆಚ್ಚುವರಿ ಬಸ್‌ಗಳನ್ನು ಓಡಿಸಿದ್ದು, ಇದುವರೆಗೆ 6,641 ಪ್ರಯಾಣಿಕರನ್ನು ಸಾಗಿಸಿದೆ. ಅಲ್ಲದೆ, 231 ಬಸ್‌ಗಳನ್ನು ಕಾಯ್ದಿರಿಸಲಾಗಿದೆ.
ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿರುವುದರಿಂದ ಆತಂಕಪಡಬೇಕಿಲ್ಲ ಎಂದು ಕೆಎಸ್‌ಆರ್‌ಟಿಸಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ವ್ಯಕ್ತಿಗತ ಅಂತರ ಖಚಿತಪಡಿಸಿಕೊಂಡ ನಂತರ ಮತ್ತು ಥರ್ಮಲ್ ಸ್ಕ್ರೀನಿಂಗ್ ನಡೆಸಿ ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಹೆಚ್ಚುವರಿ ಬಸ್ಸುಗಳನ್ನು ಓಡಿಸಲು ಈಗಾಗಲೇ ಯೋಜಿಸಲಾಗಿದೆ ಎಂದು ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


