ಕೋವಿಡ್ ಶಂಕಿತ ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು: 108 ಆರೋಗ್ಯ ಕವಚಕ್ಕೆ ಆರೋಗ್ಯ ಇಲಾಖೆ ಸೂಚನೆ
ಕೊರೋನಾ ಸೋಂಕಿನ ಶಂಕಿತ ವ್ಯಕ್ತಿಯ ತಪಾಸಣಾ ವರದಿ ಬರುವುದು ಬಾಕಿ ಇದ್ದರೂ ಅವರನ್ನು ತಕ್ಷಣ ನಿಗದಿತ ಕೋವಿಡ್ ಆಸ್ಪತ್ರೆಗೆ ಕೂಡಲೇ ದಾಖಲಿಸಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ನೀಡಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಶಂಕಿತ ವ್ಯಕ್ತಿಯ ತಪಾಸಣಾ ವರದಿ ಬರುವುದು ಬಾಕಿ ಇದ್ದರೂ ಅವರನ್ನು ತಕ್ಷಣ ನಿಗದಿತ ಕೋವಿಡ್ ಆಸ್ಪತ್ರೆಗೆ ಕೂಡಲೇ ದಾಖಲಿಸಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ನೀಡಿದ್ದಾರೆ. ಈ ಕುರಿತು 108 ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ಕೋವಿಡ್ ಶಂಕಿತರು ಎಂದು ಪರಿಗಣಿಸಿ, ಆಸ್ಪತ್ರೆಗೆ ದಾಖಲಿಸಿಕೊಂಡು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಬೇಕು. ಅವರಿಗೆ ಬಿಬಿಎಂಪಿ ಅಧಿಕಾರಿಗಳ ಪತ್ರ ಅಗತ್ಯವಿಲ್ಲ. ಸೋಂಕು ದೃಢಪಟ್ಟಲ್ಲಿ ಕೋವಿಡ್ ವಾರ್ಡ್‌ಗೆ ಸ್ಥಳಾಂತರ ಮಾಡಬೇಕು. ಪರೀಕ್ಷೆ ನೆಗೆಟೀವ್ ಬಂದಲ್ಲಿ ಅಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕು ಎಂದು ಸೂಚಿಸಿದ್ದಾರೆ.
108ಕ್ಕೆ ಕರೆ ಬಂದಲ್ಲಿ ಸೋಂಕಿತರಾಗಿದ್ದಾರೆಯೇ ಅಥವಾ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದೆಯೇ ಎಂದು ವಿಚಾರಿಸಿ ಸನಿಹ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು.ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಾದ ವ್ಯಕ್ತಿಯನ್ನು ನಿಗದಿತ ಆಸ್ಪತ್ರೆಗೆ ಸ್ಥಳಾಂತರಿಸುವುದು108 ಕರ್ತವ್ಯ. ವ್ಯಕ್ತಿ ನೇರವಾಗಿ ಕೋವಿಡ್ ಆರೈಕೆ ಕೇಂದ್ರಕ್ಕೆ ಬಂದಲ್ಲಿ ದಾಖಲು ಮಾಡಿಕೊಂಡು ಬಿಬಿಎಂಪಿಗೆ ಮಾಹಿತಿ ನೀಡಬೇಕು ಎಂದು ಸುತ್ತೋಲೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


