ಸೆಪ್ಟೆಂಬರ್ 7 ರಿಂದ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ
ಈಗಾಗಲೇ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ.

ಬೆಂಗಳೂರು: ಈಗಾಗಲೇ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಕೆ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು ಸೆಪ್ಟೆಂಬರ್ 7 ರಿಂದ 28ರವರೆಗೂ ನಡೆಸುವುದಾಗಿ ತಿಳಿಸಿದೆ. ಬ್ಯಾಕ್‌ಲಾಗ್ ಪರೀಕ್ಷೆಗಳನ್ನೂ ಕೂಡ ಅದೇ ದಿನವೇ ನಡೆಸುವುದಾಗಿಯೂ ಇಲಾಖೆ ತಿಳಿಸಿದೆ. ಪರೀಕ್ಷೆ ಕುರಿತ ಉಳಿತ ವಿವರಗಳನ್ನು ಇಲಾಖೆಯು ವೆಬ್ ಪೋರ್ಟಲ್ ಮತ್ತು www.dtek.karnataka.gov.in, ನಲ್ಲಿ ತಿಳಿಸಿದೆ.
ಪರೀಕ್ಷೆಗಳನ್ನು ಈ ಹಿಂದೆ ಜು.15ರಿಂದ ಆಗಸ್ಟ್ 8ರವರೆಗೂ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಲಾಕ್'ಡೌನ್ ಪರಿಣಾಮ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಇದೀಗ ಪರೀಕ್ಷೆ ಬರೆಯಲು ಇಲಾಖೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ಹತ್ತಿರ ಇರುವ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ.
ಈಗಾಗಲೇ ಪ್ರಾಕ್ಟಿಕಲ್ ಎಕ್ಸಾಮ್ ಗಳನ್ನು ರದ್ದುಗೊಳಿಸಲಾಗಿದ್ದು, ಒಂದು ವೇಳೆ ಅನಾರೋಗ್ಯದಿಂದಾಗಿ ಅಥವಾ ಕೊರೋನಾ ಲಕ್ಷಣಗಳಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೇ ಹೋದಲ್ಲಿ ಮುಂದೆ ಬರೆಯುವ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ. ಈ ವೇಳೆ ಮೊದಲ ಬಾರಿ ಬರೆದ ಪರೀಕ್ಷೆಯೆಂದೇ ಅದನ್ನು ಪರಿಗಣಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಇಲಾಖೆ ತಿಳಿಸಿದೆ.
ಈ ನಡುವೆ ಎರಡನೇ ಹಾಗೂ ನಾಲ್ಕನೆ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಹಿಂದಿನ ಸೆಮಿಸ್ಟರ್ ಗಳಲ್ಲಿ ಬರೆದ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲಾಗುತ್ತದೆ.
ಇನ್ನು ಸಂಜೆ ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂಟರ್ನಲ್ ಮಾರ್ಕ್ಸ್ ಗಳ ಮೂಲಕ ಅಂಕಗಳನ್ನು ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


