ಶಕ್ತಿ ಕೇಂದ್ರದಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು: ಪಶುಸಂಗೋಪನೆ, ಕನ್ನಡ ಸಂಸ್ಕೃತಿ ಇಲಾಖೆ ಕಚೇರಿ ಸೀಲ್ ಡೌನ್
ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮತ್ತು ವಿಕಾಸೌಧದಲ್ಲಿಯೂ ಕೊರೋನಾ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು,ಇದೀಗ ಮತ್ತಿಬ್ಬರಿಗೂ ವಿಕಾಸಸೌಧದಲ್ಲಿ ಕಾರ್ಯನಿರ್ವ ಹಿಸುವ ಇಬ್ಬರಿಗೆ ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮತ್ತು ವಿಕಾಸೌಧದಲ್ಲಿಯೂ ಕೊರೋನಾ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು,ಇದೀಗ ಮತ್ತಿಬ್ಬರಿಗೂ ವಿಕಾಸಸೌಧದಲ್ಲಿ ಕಾರ್ಯನಿರ್ವ ಹಿಸುವ ಇಬ್ಬರಿಗೆ ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ.
ವಿಕಾಸಸೌಧದಲ್ಲಿನ ಪಶು ಸಂಗೋಪನಾ ಇಲಾಖೆಯ ಮಹಿಳಾ ಉದ್ಯೋಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉದ್ಯೋಗಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.ಹೀಗಾಗಿ ವಿಕಾಸಸೌಧದಲ್ಲಿನ ನಾಲ್ಕನೇ ಮಹಡಿ ಯಲ್ಲಿರುವ ಎರಡೂ ಕಚೇರಿಗಳನ್ನು ಸೀಲ್ಡೌನ್ ಮಾಡಲಾಗಿದೆ.ಅಲ್ಲದೇ, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ನಡುವೆ,ಲಾಕ್ಡೌನ್ ವೇಳೆಯಲ್ಲಿ ಸರ್ಕಾರವೇ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿಲ್ಲ.ಸಚಿವಾಲಯ ದ ಸಿಬ್ಬಂದಿಯಲ್ಲಿ ೫೦ ವರ್ಷಕ್ಕಿಂತ ಮೇಲ್ಪಟ್ಟವರು ಇದ್ದಾರೆ ಮತ್ತು ಹಲವು ರೀತಿಯ ಕಾಯಿಲೆಗಳಿಂದ ಬಳಲು ತ್ತಿರುವ ರೋಗಿಗಳು ಇದ್ದಾರೆ.ಅವರನ್ನೆಲ್ಲಾ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.ಅವರನ್ನು ಸರಿ ಯಾಗಿ ವಿಂಗಡನೆ ಮಾಡದೆ ತಾರತಮ್ಯ ಮಾಡಲಾಗುತ್ತಿದೆ.ತಾರತಮ್ಯ ಮುಂದುವರೆದರೆ ಸಿಬ್ಬಂದಿ ಸಾಮೂಹಿಕ ರಜೆ ಹಾಕಿ ಮನೆಯಲ್ಲಿರಬೇಕಾಗುತ್ತದೆ ಅಥವಾ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಚಿವಾ ಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


