ಶಿವಮೊಗ್ಗ: ಎಸ್ ಎಸ್ ಎಲ್ ಸಿ ಮೌಲ್ಯಮಾಪನದಲ್ಲಿದ್ದ ಶಿಕ್ಷಕ ಸಾವು
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕರ್ತವ್ಯದಲ್ಲಿದ್ದ ಶಿಕ್ಷಕರೊಬ್ಬರು ಏಕಾಏಕೀ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಶಿವಮೊಗ್ಗ: ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕರ್ತವ್ಯದಲ್ಲಿದ್ದ ಶಿಕ್ಷಕರೊಬ್ಬರು ಏಕಾಏಕೀ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಭದ್ರಾವತಿಯ ಕುಮಾರ್ (48) ಮೃತ ಶಿಕ್ಷಕರು. ಇವರು ಭದ್ರಾವತಿಯ ನ್ಯೂಟೌನ್ ನಲ್ಲಿರುವ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು
ಮೃತ ಶಿಕ್ಷಕ ಕುಮಾರ್ ಅವರು ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.ಆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸಿಬ್ಬಂದಿಗಳು ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಗೆ ಸಾಗುವ ಮಾರ್ಗದ ನಡುವೇ ಕುಮಾರ್ ಮೃತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


