ರಾಜ್ಯ

2 ಲಕ್ಷ ಆಂಟಿಜೆನ್ ಕಿಟ್‌ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಶೇಕಡಾ 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

2 ಲಕ್ಷ ಆಂಟಿಜೆನ್ ಕಿಟ್‌ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು
ಬಿ. ಶ್ರೀರಾಮುಲು
Published On :

ಬಳ್ಳಾರಿ: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ  ಶೇಕಡಾ 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯ ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರ ಖಾಸಗಿ ಆಸ್ಪತ್ರೆಗಳು ಶೇಕಡಾ 50ರಷ್ಟು ಹಾಸಿಗೆಗಳನ್ನು  ಕೋವಿಡ್ ಸೋಂಕಿತರಿಗೆ ಮೀಸಲಿರಿಸಬೇಕು. ಹಲವು ಖಾಸಗಿ ಆಸ್ಪತ್ರೆಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿವೆ. ಆದರೆ ಕೆಲವು ಖಾಸಗಿ ಆಸ್ಪತ್ರೆಗಳು ಇದನ್ನು ಪಾಲಿಸುತ್ತಿಲ್ಲ.‌ ಹೀಗಾಗಿ, ಅಂತಹ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅವುಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದರು.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2 ಲಕ್ಷಕ್ಕೂ ಅಧಿಕ ಆ್ಯಂಟಿಜೆನ್ ಕಿಟ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಈಗಾಗಲೇ 1 ‌ಲಕ್ಷ ಕಿಟ್‌ಗಳನ್ನು ಖರೀದಿಸಲಾಗಿದೆ. ಕೋವಿಡ್ ಟೆಸ್ಟ್ ರಿಪೋರ್ಟ್ ಬರಲು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗೆ 2-3 ಪರೀಕ್ಷೆಯ ಪ್ರಯೋಗಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದು, ಇದರಿಂದ ಶೀಘ್ರ ಪರೀಕ್ಷಾ ಫಲಿತಾಂಶ ಬರಲು ಸಹಕಾರಿಯಾಗಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.