ದ್ವಿತೀಯ ಪಿಯುಸಿಯಲ್ಲಿ ಫೇಲ್: ತುಮಕೂರಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಇದು ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿವಿದ್ಯಾರ್ಥಿ ಆತ್ಮಹತ್ಯೆಯ ಎರಡನೇ ಘಟನೆಯಾಗಿದೆ.

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಇದು ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿವಿದ್ಯಾರ್ಥಿ ಆತ್ಮಹತ್ಯೆಯ ಎರಡನೇ ಘಟನೆಯಾಗಿದೆ.
ಪಿಯುಸಿ ವಿದ್ಯಾರ್ಥಿ ಮಂಗಳವಾರ ಬಸವಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಮೃತನನ್ನು ವಿಜಯ ಪಿಯು ಕಾಲೇಜಿನ ವಿದ್ಯಾರ್ಥಿ ಚೇತನ್ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು ಜೀವಶಾಸ್ತ್ರ (30) ಮತ್ತು ರಸಾಯನಶಾಸ್ತ್ರ (29) ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ ಆದರೆ ಒಟ್ಟಾರೆ ಶೇ 89 ರಷ್ಟು ಅಂಕ ಗಳಿಸಿದ್ದ.
ಸ್ನಾನ ಮಾಡುವ ನೆಪದಲ್ಲಿ ವಿದ್ಯಾರ್ಥಿ ಬಾತ್ ರೂಮ್ ಗೆ ತೆರಳಿ ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದು ಗಂಟೆ ಕಳೆದರೂ ಮಗ ಬಾರದೆ ಹೋದಾಗ ತಾಯಿ ಆತನ ತಂದೆಯನ್ನು ಕರೆದಿದ್ದಾಳೆ.ತಂದೆ ಬಾಗಿಲು ಒಡೆದು ನೋಡಲಾಗಿ ಮಗ ಆತ್ಮಹತ್ಯೆಗೆ ಶರಣಾಗಿದ್ದು ತಿಳಿದಿದೆ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದರೂ ಅಲ್ಲಿನ ವೈದ್ಯರು ಆತ ಸತ್ತಿರುವುದಾಗಿ ಘೋಷಿಸಿದ್ದಾರೆ.
ಘಟನೆ ಸಂಬಂಧ ಕ್ಯಾತಸಂದ್ರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


